ಶಿವಮೊಗ್ಗ : ಹೊಳೆಹೊನ್ನೂರಿನಲ್ಲಿ ಹೊಸ ವರ್ಷದಂದು ಬಿರಿಯಾನಿ ತಿನ್ನಲು ಬಾರ್‌ಗೆ ಹೋಗಿದ್ದ ವ್ಯಕ್ತಿಯೊಬ್ಬರ ಮೇಲೆ ಮಚ್ಚು ಮತ್ತು ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.


ಹೊಳೆಹೊನ್ನೂರಿನ ಉಪ್ಪಾರರ ಬೀದಿಯ ರವಿ ಹಲ್ಲೆಗೊಳಗಾದವರು ಎಂದು ಗುರುತಿಸಲಾಗಿದೆ. ಕನಸಿನಕಟ್ಟೆ ರಸ್ತೆಯಲ್ಲಿರುವ ಬಾರ್‌ನಲ್ಲಿ ಈ ಘಟನೆ ಸಂಭವಿಸಿದ್ದು, ಹೊಳೆಹೊನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವ್ಯಕ್ತಿ, ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.


ರವಿ ತಮ್ಮ ಚಿಕ್ಕಮ್ಮನ ಮಗನೊಂದಿಗೆ ಬಾರ್‌ನಲ್ಲಿ ಬಿರಿಯಾನಿ ತಿನ್ನಲು ತೆರಳಿದ್ದರು. ಈ ಸಂದರ್ಭ ಬಾರ್‌ನಲ್ಲಿದ್ದ ಇಬ್ಬರು ಯುವಕರು ರವಿ ಮೇಲೆ ದಾಳಿ ನಡೆಸಿದ್ದಾರೆ. ಮಚ್ಚು ಮತ್ತು ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.


ಈ ಸಂಬಂಧ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By admin

ನಿಮ್ಮದೊಂದು ಉತ್ತರ

error: Content is protected !!