ಸಾಗರ: ತಾಲೂಕಿನ ಆನಂದಪುರದ ಆಚಾಪುರದ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಇಂದು ಮುಂಜಾನೆ ಶಿವಮೊಗ್ಗದಿಂದ ಸಾಗರ ಕಡೆಗೆ ಬರುತ್ತಿದ್ದ ಕಾರು 11 ಕೆವಿ ವಿದ್ಯುತ್ ಸಾಮರ್ಥ್ಯವಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಸಂಪೂರ್ಣ ಜಖಂಗೊಂಡಿದ್ದು, ಕಾರಿನ ಮುಂಭಾಗ ಕೂಡ ಜಖಂಗೊಂಡಿದೆ.
ಇಂದು ಮುಂಜಾನೆ ಭಾರಿ ಪ್ರಮಾಣದ ಇಬ್ಬನಿ ಬೀಳುತ್ತಿದ್ದ ಕಾರಣ ಚಾಲಕ 11 ಕೆವಿ ವಿದ್ಯುತ್ ಸಾಮರ್ಥ್ಯವಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವುದಾಗಿ ತಿಳಿದು ಬಂದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.