ಶಿವಮೊಗ್ಗ .ಜ.09 ಜ. 12 ರಿಂದ 18 ರ ವರಗೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಭಕ್ತಿ, ಜ್ಞಾನ, ರಾಜ್ಯ ಮಟ್ಟದ ಮಕ್ಜಳ ಕನ್ನಡ ಸಾಹಿತ್ಯ ಸಮ್ಮೇಳನ ,ಧಾರ್ಮಿಕ ವಿಚಾರ ಗೋಷ್ಠಿಗಳ ಆಯೋಜನೆ.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ 71ನೇ ಪೀಠಾಧ್ಯಕ್ಷರಾಗಿ ಸಿದ್ಧ ಸಿಂಹಾಸನಾರೋಹಣ ಮಾಡಿದಂತಹ ಪರಮಪೂಜ್ಯ ಯುಗ ಯೋಗಿ ಜಗದ್ಗುರು ಪದ್ಮಭೂಷಣ ಶ್ರೀ ಶ್ರೀ ಶ್ರೀ ಡಾ.ಬಾಲಗಂಗಾಧರನಾಥ ಮಹಾ ಸ್ವಾಮಿಗಳವರು ಜನಸಾಮಾನ್ಯರ ಉದ್ಧಾರಕ್ಕಾಗಿ
ಅನ್ನ, ಅಕ್ಷರ, ಆರೋಗ್ಯ, ಆಶ್ರಯ, ಆಕಳು, ಪರಿಸರ ಮುಂತಾದ ಕ್ಷೇತ್ರಗಳಲ್ಲಿ ಆಂದೋಲನವನ್ನೇ ಮಾಡಿದರು. ಶೈಕ್ಷಣಿಕ, ಧಾರ್ಮಿಕ ಹಾಗೂ ಸಮಾಜ ಕ್ಷೇತ್ರದಲ್ಲಿ ಅಪಾರ ಸೇವೆಯನ್ನು ಸಲ್ಲಿಸಿದ್ದಾರೆ.
ಪರಮ ಪೂಜ್ಯರ ಅವಿಶ್ರಾಂತ ಕಾಯಕದ ಫಲವಾಗಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ಅಡಿಯಲ್ಲಿ 475 ಕ್ಕೂ ಹೆಚ್ಚಿನ ವಿದ್ಯಾಸಂಸ್ಥೆಗಳು ಸ್ಥಾಪನೆಗೊಂಡಿದ್ದು, ಶಿಕ್ಜ್ಹಣ ಸಂಸ್ಥೆಗಳಲ್ಲಿ ಒಂದು ಲಕ್ಷದ ಅರವತ್ತು ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಪೂರ್ವ ಪ್ರಾಥಮಿಕ ಶಾಲೆಯಿಂದ ಸಂಸ್ಕೃತ ವೇದಾಗಮ ಹಾಗೂ ತಾಂತ್ರಿಕ, ವೈದ್ಯಕೀಯ ವಿಜ್ಞಾನದ ವರಗೆ ಯಾವುದೇ ಜಾತಿ, ಮತ, ಲಿಂಗ ಭೇದ ವಿಲ್ಲದೆ ವ್ಯಾಸಂಗ ಮಾಡುತ್ತಿದ್ದಾರೆ.
ಶ್ರೀ ಮಠದ ವತಿಯಿಂದ ವಿವಿಧ ಕಾರ್ಯಕ್ರಮಗಳು:
ಜನವರಿ 12 ರಿಂದ 18ರ ವರೆಗೆ 12ನೇ ಸಂಸ್ಮರಣಾ ಮಹೋತ್ಸವ ನಡೆಯಲಿದ್ದು, ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪರಮಪೂಜ್ಯ ಜಗದ್ಗುರು ಶ್ರೀಶ್ರೀಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ವಹಿಸಲಿದ್ದು, 12.1.2025 ರಂದು ಕೃಷಿ ಮೇಳ ಮತ್ತು ರೈತ ಸಂಗಮ, 13.1.2025 ಹೋಮ, ಹವನಾದಿ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಕೃಷಿ ಮೇಳ ಮತ್ತು ರೈತ ಸಂಗಮ 14.1.2025 ರ ಮಂಗಳವಾರ ರಂದು ಹಿರಿಯ ವಿದ್ಯಾರ್ಥಿಗಳ ಸಂಗಮ 15.1.2025,ಬುಧವಾರದಂದು ಎಸ್. ಎಸ್. ಎಲ್. ಸಿ ವಿದ್ಯಾರ್ಥಿಗಳ ಕಾರ್ಯಗಾರ, 16.1.2025,ಗುರುವಾರ ರಾಜ್ಯ ಮಟ್ಟದ ಮಕ್ಜಳ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲಾಗುವುದು. 17.1.2025, ಶುಕ್ರವಾರ ಚುಂಚಾದ್ರಿ ಮಾತೃ ಸಂಗಮ, 18.1.2025,ರಂದು ಶನಿವಾರ ಜಯಂತ್ಯುತ್ಸವ ಹಾಗೂ ಸಂತ ಭಕ್ತ – ಸಂಗಮ ನಡೆಯಲಿದೆ, ಈ ಎಲ್ಲಾ ಕಾರ್ಯಕ್ರಮ ಜೊತೆಗೆ ಪ್ರತಿದಿನ ಗೀತಗಾಯನ ಹಮ್ಮಿಕೊಳ್ಳಲಾಗಿದೆ, ವಿಶಿಷ್ಟ ವಿನೂತನ ಕಾರ್ಯಕ್ರಮಗಳು ಅತ್ಯಂತ ಶ್ರದ್ಧಾ ಭಕ್ತಿಯಿಂದ ನೆರವೇರಿಸಲಾಗುವುದು. ಅಂದು ನಾಡಿನ ಸಾಧು ಸಂತರು, ಗಣ್ಯ ವ್ಯಕ್ತಿಗಳು, ಶ್ರೀಮಠದ ಸದ್ಭಕ್ತರು, ಪರಮ ಪೂಜ್ಯರ ಶಿಷ್ಯ ವೃಂದದವರು ಕಾರ್ಯಕ್ರಮದಲ್ಲಿ ಭಾಗವಹಿಸುವರು
ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.