ಶಿವಮೊಗ್ಗ: 384 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಶಿವಮೊಗ್ಗ ವಿಮಾನ ನಿಲ್ಧಾಣ ಕಾಮಗಾರಿ ಅತ್ಯಂತ ಭರದಿಂದ ಸಾಗುತ್ತಿದ್ದು, ಈ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ವ್ಯವಸ್ಥೆ ಕಲ್ಪಿಸುವುದರಿಂದ ಜಿಲ್ಲೆಯಲ್ಲಿ ಹೊಸ ಹೊಸ ಉದ್ಯಮಗಳು ಆರಂಭಗೊಳ್ಳಲು ಅನುಕೂಲವಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.


ಅವರು ಇಂದು ಸೋಗಾನೆ ಸರಹದ್ದಿನಲ್ಲಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಯ ಸ್ಥಳ ವೀಕ್ಷಣೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಪ್ರಸ್ತುತ ರನ್ ವೇ ಹಾಗೂ ಕಾಂಪೌಂಡ್ ಕೆಲಸ ಭರದಿಂದ ಸಾಗುತ್ತಿದೆ. ಇದೇ ಸಂದರ್ಭದಲ್ಲಿ 2ನೇ ಹಂತದ ಕಾಮಗಾರಿಗೆ ಟೆಂಡರ್ ಕರೆಯಲು ನಿರ್ಧರಿಸಲಾಗಿದ್ದು,

ವರ್ಷದೊಳಗೆ ವಿಮಾನ ನಿಲ್ದಾಣ ಕಾಮಗಾರಿ ಮುಗಿಯಲಿದೇ ಎಂದು ಹೇಳಿದರು.
ಇದೇ ಜಾಗದಲ್ಲಿ 4 ಎಕರೆ ಭೂಮಿಯನ್ನು ಈ ಕಾಮಗಾರಿಗೆ ಅಗತ್ಯವಿರುವ ಜೆಲ್ಲಿ ತೆಗೆಯಲು ಅವಕಾಶ ನೀಡಲಾಗಿದೆ. ಜಿಲ್ಲಾಧಿಕಾರಿಗಳು ಇದಕ್ಕೆ ಟೆಂಡರ್ ನೀಡಿದ್ದು, ಅದರಿಂದ ಆಗುವ ಗುಂಡಿಯನ್ನು ಮುಚ್ಚಿಸಲಾಗುವುದು ಎಂದು ಹೇಳಿದರು.


ಇಂದಿನ ದಿನಗಳಲ್ಲಿ ಕಾಮಗಾರಿ ಅತ್ಯಂತ ವೇಗ ಗತಿಯಲ್ಲಿ ನಡೆಯುತ್ತಿರುವುದು ಸಂತಸದ ವಿಚಾರ. ಬರುವ ತಿಂಗಳು ಮತ್ತೆ ಭೇಟಿ ನೀಡಿ ಇದರ ಪ್ರಗತಿಯನ್ನು ಅವಲೋಕಿಸುತ್ತೇನೆ ಎಂದು ತಿಳಿಸಿದ ಯಡಿಯೂರಪ್ಪ ಅವರು, ಇದೇ ಸಂದರ್ಭದಲ್ಲಿ ಗುತ್ತಿಗೆದಾರರಿಗೆ ಏನಾದರೂ ಸಮಸ್ಯೆ ಇದೇಯೇ ಎಂದು ಕೇಳುವ ಮೂಲಕ ಇದಕ್ಕೆ ಅಗತ್ಯದ ಹಣವನ್ನು ಬಿಡುಗಡೆ ಮಾಡುತ್ತೇನೆ ಎಂದರು.
ಈ ಸಂದರ್ಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಆಯನೂರು ಮಂಜುನಾಥ್, ಎಸ್.ರುದ್ರೇಗೌಡ, ಅಶೋಕ್ ನಾಯ್ಕ್, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್, ಜಿಲ್ಲಾಧಿಕಾರಿ ಶಿವಕುಮಾರ್, ಜಿ.ಪಂ. ಸಿಇಒ ಎಂ.ಎಲ್. ವೈಶಾಲಿ, ಪಾಲಿಕೆ ಮೇಯರ್ ಸುವರ್ಣಶಂಕರ್, ಉಪಮೇಯರ್ ಸುರೇಖಾ ಮುರುಳೀಧರ್, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.


ಆರ್ಥಿಕವಾಗಿ ಸಬಲರು, ಹಣವುಳ್ಳವರು, ಹೆಚ್ಚಾಗಿ ಬಿಪಿಎಲ್ ಕಾರ್ಡ್ ಬಳಸಿಕೊಳ್ಳುತ್ತಿದ್ದಾರೆಂಬ ಆರೋಪವಿದೆ. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಈ ಸಂಬಂಧ ಸೂಚನೆ ನೀಡಿದ್ದು, ಶ್ರೀಮಂತರು ದುರ್ಬಳಕ್ಕೆ ಮಾಡಿಕೊಳ್ಳುತ್ತಿದ್ದರೆ ಅವುಗಳನ್ನು ವಜಾ ಮಾಡಲು ಸೂಚಿಸಿದ್ದೇನೆ.
ಸಚಿವ ಉಮೇಶ್ ಕತ್ತಿ ಬಿಪಿಎಲ್ ಕಾರ್ಡ್ ವಿಚಾರಕ್ಕೆ ನೀಡಿರುವ ಹೇಳಿಕೆ ಸರಿಯೇ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಅದರ ಚರ್ಚೆ ಅನಗತ್ಯ. ಶ್ರೀಮಂತರು ತಮ್ಮ ಇಚ್ಛಾಶಕ್ತಿ ಬಳಸಿ ಬಿಪಿಎಲ್ ಕಾರ್ಡ್‌ಗಳನ್ನು ವಾಪಾಸ್ ಕೊಡಿ.
-ಯಡಿಯೂರಪ್ಪ

ಕಾನೂನು ಚೌಕಟ್ಟಿನಲ್ಲಿ ಸಂವಿಧಾನದ ಇತಿಮಿತಿಗಳನ್ನು ಆಧರಿಸಿ ಯಾರಿಗೂ ನೋವಾಗದಂತೆ ಮೀಸಲಾತಿ ನಿರ್ಣಯ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಸಚಿವರು ಮೀಸಲಾತಿ ಹೋರಾಟದಲ್ಲಿ ಭಾಗವಹಿಸಿರುವುದು ಸರಿಯಲ್ಲ. ಬೆಂಗಳೂರಿಗೆ ಹೋದ ನಂತರ ಈ ಬಗ್ಗೆ ಅಗತ್ಯ ಕ್ರಮಗಳನ್ನು ಹಿರಿಯ ಮುಖಂಡರೊಂದಿಗೆ ಪಕ್ಷದ ಸಮಸ್ತರೊಂದಿಗೆ ಚರ್ಚಿಸಲಾಗುತ್ತದೆ ಎಂದು ಹೇಳಿದರು.

By admin

ನಿಮ್ಮದೊಂದು ಉತ್ತರ

error: Content is protected !!