ಶಿವಮೊಗ್ಗ : ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ನೇತೃತ್ವದಲ್ಲಿ ಆಲ್ಕೋಳ ವೃತ್ತದ ಬಳಿಯಿರುವ ಸ್ಯಾನ್ ಜೋಸ್ ಪ್ರೌಢಶಾಲಾ ಆವರಣದಲ್ಲಿ ಜನವರಿ 11 ರಂದು ಶನಿವಾರ ಶಿವಮೊಗ್ಗ ತಾಲ್ಲೂಕು ಹನ್ನೊಂದನೆಯ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಏರ್ಪಡಿಸಲಾಗಿದೆ.
ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗೋಪಾಳದ ಶ್ರೀ ರಾಮಕೃಷ್ಣ ವಿದ್ಯಾನಿಕೇತನದ ವಿದ್ಯಾರ್ಥಿನಿ ನೇಹಾ ಹೊಸಮನೆ ಆಯ್ಕೆಯಾಗಿದ್ದಾರೆ. ಗಾಜನೂರು ಕೆ.ಪಿ.ಎಸ್. ಶಾಲೆಯ ವಿದ್ಯಾರ್ಥಿನಿ ತಾರಾ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷರಾದ ಡಿ. ಮಂಜುನಾಥ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎಸ್. ಆರ್. ಮಂಜುನಾಥ, ಕ್ಷೇತ್ರ ಶಿಕ್ಷಣಾಧಿಕಾರಿ ನೇತ್ರಾವತಿ ಸ್ಯಾನ್ ಜೋಸ್ ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ರೆ. ಫಾದರ್ ಸಾಜನ್ ಕೆ. ಟಿ., ಸಹ ಶಿಕ್ಷಕರಾದ ಭದ್ರಪ್ಪ ಭಾಗವಹಿಸಲಿದ್ದಾರೆ. ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಮಹಾದೇವಿ ಪ್ರಾಸ್ತಾವಿಕ ಮಾತುಗಳನ್ನಾಡಲಿದ್ದಾರೆ.
ಉದ್ಘಾಟನಾ ಕಾರ್ಯಕ್ರಮದ ನಂತರ ನಡೆಯುವ ಕಥಾಗೋಷ್ಟಿಯ ಅಧ್ಯಕ್ಷತೆಯನ್ನು ಮಂಡಘಟ್ಟ ಸರ್ಕಾರಿ ಪ್ರೌಢಶಾಲೆಯ ಕಾರ್ತಿಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಥಾಗೋಷ್ಟಿಯಲ್ಲಿ ಕಸ್ತೂರಬಾ ಬಾಲಿಕ ಪ್ರೌಢಶಾಲೆಯ ಜಾಹ್ನವಿ, ಪ್ರಬಂಧಗೋಷ್ಟಿಯಲ್ಲಿ ಸ್ಯಾನ್ ಜೋಸ್ ಪ್ರೌಢಶಾಲೆಯ ವರುಣ್ ಅಧ್ಯಕ್ಷತೆ ವಹಿಸಲಿದ್ದಾರೆ.
ತಾಲ್ಲೂಕಿನ ವಿವಿಧ ಶಾಲೆಗಳ ಸುಮಾರು ಎರಡು ನೂರು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಶಿಕ್ಷಕರು ಭಾಗವಹಿಸಲು ಇಲಾಖೆಯ ವತಿಯಿಂದ ಓಓಡಿ ಸೌಲಭ್ಯ ನೀಡಲಾಗುತ್ತಿದೆ. ತಾಲ್ಲೂಕು ಸಮ್ಮೇಳನದಿಂದ ಜನವರಿ 13 ರಂದು ಶ್ರೀ ರಾಮಕೃಷ್ಣ ವಿದ್ಯಾನಿಕೇತನ ದಲ್ಲಿ ಜಿಲ್ಲಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಅಧ್ಯಕ್ಷರಾದ ಡಿ.ಮಂಜುನಾಥ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.