ಶಿವಮೊಗ್ಗ ಜ.13 :: ಜಿಲ್ಲಾ ಭೋವಿ (ವಡ್ಡರ್) ವಿದ್ಯಾವರ್ಧಕ ಸಂಘ ಹಾಗೂ ಜಿಲ್ಲಾಡಳಿತದ ವತಿಯಿಂದ ಜ. ೧೪ ರಂದು ಬೆಳಗ್ಗೆ ೧೦ ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಆಚರಿಸಲಾಗುವುದು ಎಂದು ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ ತಿಳಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಚರಿಸಲಾಗುವುದು ಎಂದರು.
ಕಾರ್ಯಕ್ರಮವು ಬೆಳಗ್ಗೆ ೧೧ ಗಂಟೆಗೆ ಆರಂಭವಾಗುತ್ತದೆ. ಸಚಿವ ಎಸ್. ಮಧು ಬಂಗಾರಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಕಾರ್ಯಕ್ರಮದಲ್ಲಿ ಸಚಿವ ಶಿವರಾಜ್ ಎಸ್. ತಂಗಡಗಿ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರುಗಳಾದ ಎಸ್. ಎನ್.ಚನ್ನಬಸಪ್ಪ, ಬಿ.ಕೆ.ಸಂಗಮೇಶ್, ಆರಗ ಜ್ಙಾನೇಂದ್ರ, ಗೋಪಾಲಕೃಷ್ಣ ಬೇಳೂರು, ಶಾರದ ಪೂರ್ಯನಾಯ್ಕ್ ,ಬಿ.ವೈ, ವಿಜಯೇಂದ್ರ, ಎಸ್. ಎಲ್.ಭೋಜೇಗೌಡ,ಭಾರತಿ ಶೆಟ್ಟಿ ,ಡಿ.ಎಸ್.ಅರುಣ್, ಡಾ.ಧನಂಜಯ ಸರ್ಜಿ ಹಾಗೂ ಬಲ್ಕೀಶ್ ಭಾನು ಉಪಸ್ಥಿತರಿರುವರು ಎಂದರು.
ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರುಗಳಾದ ಜಿ. ಪಲ್ಲವಿ, ಹೆಚ್ .ಎಸ್. ಸುಂದರೇಶ್, ಡಾ.ಅಂಶುಮಂತ್, ಆರ್. ಎಂ. ಮಂಜುನಾಥ ಗೌಡ, ಸಿ.ಎಸ್. ಚಂದ್ರಭೂಪಾಲ, ಭೋವಿ ಸಮಾಜದ ಮುಖಂಡ ಜಗದೀಶ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಧ್ಯಾಪಕ ಡಾ. ಮೋಹನ್ ಚಂದ್ರಗುತ್ತಿ ವಿಶೇಷ ಉಪನ್ಯಾಸ ನೀಡಲಿದ್ದಾರೆಂದು ತಿಳಿಸಿದರು.
ಈ ಕಾರ್ಯಕ್ರಮಕ್ಕೆ ಸಮಾಜದ ಭಾಂದವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು. ಗೋಷ್ಠಿಯಲ್ಲಿ ಸಮಾಜದ ಪ್ರಮುಖರಾದ ಬಿ. ಜಗದೀಶ್, ಧೀರರಾಜ್ ಹೊನ್ನವಿಲೆ, ಬಸವರಾಜ್, ಲೋಕೇಶ್, ಗಣೇಶ್, ಶಶಿ, ಮೋಹನ್, ವಿರೇಶ್, ತಿಮ್ಮರಾಜು ಸೇರಿದಂತೆ ಹಲವರು ಇದ್ದರು.
…………….