dಶಿವಮೊಗ್ಗ ಜ. 18:ದಾವಣಗೆರೆ: ಶಿವಮೊಗ್ಗವೂ ಸಹ ಒಳಗೊಂಡಿರುವ ದಾವಣಗೆರೆ ಪೂರ್ವ ವಲಯ ಐಪಿಜಿ ಆಗಿ ಖಡಕ್ ಅಧಿಕಾರಿ ಡಾ.ಬಿ.ಆರ್. ರವಿಕಾಂತೇಗೌಡ ಅವರನ್ನು ರಾಜ್ಯ ಸರ್ಕಾರ ನಿಯೋಜನೆ ಮಾಡಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಡಾ.ಬಿ.ಆರ್. ರವಿಕಾಂತೇಗೌಡ ಅವರನ್ನೂ ಸೇರಿದಂತೆ ಮೂವರು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಎನ್. ಸತೀಶ್ ಕುಮಾರ್ ಅವರನ್ನು ಬೆಂಗಳೂರು ಕೇಂದ್ರ ಕಚೇರಿ ಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ಕೇಂದ್ರ ಕಚೇರಿ ಐಜಿಪಿಯಾಗಿದ್ದ ಡಾ.ಬಿ.ಆರ್. ರವಿಕಾಂತೇಗೌಡ ಅವರನ್ನು ದಾವಣಗೆರೆ ಪೂರ್ವ ವಲಯ ಐಜಿಪಿಯಾಗಿ
ವರ್ಗಾವಣೆ ಮಾಡಲಾಗಿದೆ.
ದಾವಣಗೆರೆ ಪೂರ್ವ ವಲಯ ಐಜಿಪಿ ಬಿ. ರಮೇಶ್ ಅವರನ್ನು ಬೆಂಗಳೂರು ನಗರ ಪೂರ್ವ ವಿಭಾಗದ ಜಂಟಿ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.