ಶಿವಮೊಗ್ಗ, ಜ.18 ): ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ವತಿಯಿಂದ ಜ.22 ರ ಮಧ್ಯಾಹ್ನ 2 ಗಂಟೆಗೆ ಇರುವಕ್ಕಿಯ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ 9 ನೇ ವಾರ್ಷಿಕ ಘಟಿಕೋತ್ಸವ ಸುಗ್ಗಿ ಸಂಭ್ರಮವನ್ನು ಏರ್ಪಡಿಸಲಾಗಿದೆ.
ರಾಜ್ಯಪಾಲರು ಹಾಗೂ ಕರ್ನಾಟಕ ವಿಶ್ವವಿದ್ಯಾಲಯಗಳ ಕುಲಾಧಿಪತಿಗಳಾದ ಥಾವರ್ಚಂದ್ ಗೆಹ್ಲೋಟ್ ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದಾರೆ. ಕೃಷಿ ಸಚಿವ ಹಾಗೂ ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳಾದ ಎನ್.ಚಲುವರಾಯಸ್ವಾಮಿ ಗೌರವ ಉಪಸ್ಥಿತಿ ಇರಲಿದ್ದು,
ರಾಷ್ಟಿçÃಯ ಜೀವ ವಿಜ್ಞಾನ ಕೇಂದ್ರದ ನಿರ್ದೇಶಕರಾದ ಪ್ರೊ.ಎಲ್.ಎಸ್ ಶಶಿಧರ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ಡಾ.ಆರ್.ಸಿ.ಜಗದೀಶ, ಕುಲಸಚಿವ ಡಾ.ಕೆ.ಸಿ. ಶಶಿಧರ ಹಾಗೂ ವ್ಯವಸ್ಥಾಪನ ಮಂಡಳಿಯ ಸದಸ್ಯರುಗಳು ಪಾಲ್ಗೊಳ್ಳುವರು.
…………………………..