ಶಿವಮೊಗ್ಗ, ಜ.21 : ಲೋಕೋಪಯೋಗಿ ಇಲಾಖೆ ವತಿಯಿಂದ ನಗರದ ಫ್ರೀಡಂ ಪಾರ್ಕ್ನ ಸರ್ವಾಂಗೀಣ ಅಭಿವೃದ್ದಿ ಕಾಮಗಾರಿಯ ಶಂಕುಸ್ಥಾಪನಾ ಕಾರ್ಯಕ್ರಮವನ್ನು ಜ.24 ರ ಬೆಳಿಗ್ಗೆ 10.30 ಕ್ಕೆ ಫ್ರೀಡಂ ಪಾರ್ಕಿನಲ್ಲಿ ಏರ್ಪಡಿಸಲಾಗಿದೆ.
ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಇವರು ಶಂಕುಸ್ಥಾಪನೆ ನೆರವೇರಿಸುವರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಘನ ಉಪಸ್ಥಿತಿ ಇರಲಿದೆ. ಶಾಸಕರು ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣ
ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಬಿ.ಕೆ.ಸಂಗಮೇಶ್ವರ, ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ
ನಿಗಮ ನಿಯಮಿತ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಅಧಿಕಾರಿಗಳು ಪಾಲ್ಗೊಳ್ಳುವರು