ಶಿವಮೊಗ್ಗ ಜ.22 :ಹೊಸನಗರ: ಇದೇ 2025ನೇ ಜನವರಿ 23ರ ತಾಲ್ಲೂಕಿನ ಎಂ.ಗುಡ್ಡೇಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಿನಗೊಳ್ಳಿಯಲ್ಲಿ ಶ್ರೀ ಮಾರಿಕಾಂಬಾ ದೇವಿಯ 2ನೇ ವರ್ಷದ ವರ್ಧಂತ್ಯೋತ್ಸವ ಧಾರ್ಮಿಕ ಕಾರ್ಯಕ್ರಮ ಜರುಗಲಿದೆ. ಸದಾನಂದ
ಶಿವಯೋಗ ಆಶ್ರಯ ಮೂಲೆಗದ್ದೆ ಮಠದ ಶ್ರೀ ಚನ್ನಬಸವ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಲಿದ್ದು, ಹಾಲಾಡಿ , ತಟ್ಟುವಟ್ಟಿನ ವಿದ್ವಾನ್ ಶ್ರೀ ಟಿ. ವಾಸುದೇವ ಜೋಯಿಸ್ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.
ಭಕ್ತಾದಿಗಳಿಗಾಗಿ ಮಧ್ಯಾಹ್ನ ಅನ್ನ ಸಂತರ್ಪಣೆ, ರಾತ್ರಿ ಭದ್ರಾವತಿ ಸ್ನೇಹ ಮೆಲೋಡಿಸ್ ಅವರಿಂದ ಆಕೇಸ್ಟ್ರ್ ಕಾರ್ಯಕ್ರಮ ಏರ್ಪಡಿಸಲಾಗಿದ್ದು
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಗ್ರಾಮ ಪಂಚಾಯತಿ ಅಧ್ಯಕ್ಷ ಜಿ.ಎನ್. ಪ್ರವೀಣ್ ಕೋರಿದ್ದಾರೆ.