ಶಿವಮೊಗ್ಗ ಜ 22 :ಬೆಂಗಳೂರು: ರಾಜ್ಯ ಸರ್ಕಾರದಿಂದ ನಿವೃತ್ತ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ 7ನೇ ವೇತನ ಆಯೋಗದ ಅನುಸಾರದಂತೆ ಪಿಂಚಣಿ ಮಂಜೂರಾತಿಗೆ ಆದೇಶಿಸಿದೆ.
ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ ಮತ್ತು ಪಿಂಚಣಿ ಪರಿಷ್ಕರಣೆ ಕುರಿತಂತೆ ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಪಿಂಚಣಿಯನ್ನು ದಿನಾಂಕ: 01.08.2024ರಿಂದ ಅನ್ವಯವಾಗುವಂತೆ ಅನುಷ್ಠಾನಗೊಳಿಸಲು ಸರ್ಕಾರದಲ್ಲಿ ನೀತಿ-ನಿರ್ಧಾರವನ್ನು ಕೈಗೊಳ್ಳಲಾಗಿರುತ್ತದೆ ಎಂದಿದ್ದಾರೆ.
ನೌಕರರ ವೇತನ ಮತ್ತು ಪಿಂಚಣಿ ಪರಿಷ್ಕರಣೆ ಕುರಿತಂತೆ ಕೈಗೊಳ್ಳಲಾದ ನೀತಿ ನಿರ್ಣಯವನ್ನು ಅನುಷ್ಠಾನಗೊಳಿಸಿ ಹೊರಡಿಸಿರುವ ದಿನಾಂಕ: 23.08.2024ರ ಸರ್ಕಾರಿ ಆದೇಶ ಸಂ: ಆಇ 21 ಎಸ್ಆರ್ 2024 ಮತ್ತು ದಿನಾಂಕ: 28.08.2024ರ ಸರ್ಕಾರಿ ಆದೇಶ ಸಂ, ಆ-
ಪಿಇಎನ್/262/2024ರ ಆದೇಶಗಳು ವಿಸ್ತತವಾಗಿದ್ದು ಸ್ವಯಂ-ವೇದ್ಯವಾಗಿರುತ್ತವೆ. ಸದರಿ ನಿಯಮಗಳ ಅವಕಾಶಗಳನ್ವಯ ನೌಕರರ ಪಿಂಚಣಿಯನ್ನು ಪರಿಷ್ಕರಿಸಿ ಮಂಜೂರು ಮಾಡುವ ಬಗ್ಗೆ ಸಕ್ಷಮ ಪ್ರಾಧಿಕಾರಿಗಳು ಸೂಕ್ತ ನಿರ್ಣಯ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ ಎಂದು ತಿಳಿಸಲು ನಿರ್ದೇಶಿಸಿದ್ದಾರೆ.