ಶಿವಮೊಗ್ಗ : ಜನವರಿ 31 : : ಜಿಲ್ಲೆಯ ವಿವಿಧ ಜನನಿಬಿಡ ಸ್ಥಳಗಳಲ್ಲಿ ಆಗಾಗ್ಗೆ ಸಂಭವಿಸುತ್ತಿರುವ ವಾಹನ ಅಪಘಾತಗಳು, ಸಾವು-ನೋವುಗಳನ್ನು ನಿಯಂತ್ರಿಸಲು ಸಾರಿಗೆ, ಲೋಕೋಪಯೋಗಿ ಸೇರಿದಂತೆ ಸಂಬಂಧಿಸಿದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ವಿಶೇಷ ಗಮನಹರಿಸುವಂತೆ ಸಂಸದ ಬಿ.ವೈ.ರಾಘವೇಂಧ್ರ ಅವರು ಹೇಳಿದರು.
ಅವರು ಇಂದು ನಗರದ ಪ್ರವಾಸಿ ಮಂದಿರದಲ್ಲಿ ಸಾರಿಗೆ ಸುರಕ್ಷತಾ ಕ್ರಮಗಳ ಕುರಿತು ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಪದೇಪದೇ ಆಕಸ್ಮಿಕ ಅನಾಹುತಗಳು ಸಂಭವಿಸುವ ಸ್ಥಳಗಳನ್ನು ಆಯಾ ತಾಲೂಕುಗಳ ಪೊಲೀಸ್ಠಾಣೆಗಳಿಂದ ಪಡೆದು, ಅದರ ನಿಯಂತ್ರಣಕ್ಕಾಗಿ ಕೈಗೊಳ್ಳಬಹುದಾದ ಸುರಕ್ಷತಾ ಕ್ರಮಗಳ ಕುರಿತು ಅಗತ್ಯವಿರುವ ಅನುದಾನ ಬಿಡುಗಡೆಗೊಳಿಸಲು ಕ್ರಿಯಾಯೋಜನೆಯನ್ನು ತಯಾರಿಸಿ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಕೇಂದ್ರ ಸಾರಿಗೆ ಮತ್ತು ರಸ್ತೆ ಮಂತ್ರಾಲಯದಿಂದ ಅಗತ್ಯವಿರುವ ಅನುದಾನವನ್ನು ಬಿಡುಗಡೆಗೊಳಸಲು ಯತ್ನಿಸಲಾಗುವುದು ಎಂದವರು ನುಡಿದರು.
ದೇಶದ ಪ್ರತಿಯೊಬ್ಬ ಪ್ರಜೆಯೂ ಅಮೂಲ್ಯ ಆಸ್ತಿಯಾಗಿದ್ದು, ಯಾವುದೇ ವ್ಯಕ್ತಿ ಅಪಘಾತಗಳಿಂದ ಮರಣ ಹೊಂದಬಾರದು. ಆಕಸ್ಮಿಕ ಸಾವು ದೇಶಕ್ಕೂ ಅವರ ಅವಲಂಬಿತ ಕುಟುಂಬಕ್ಕೂ ಅತೀವ ನಷ್ಟ ಉಂಟುಮಾಡಲಿದೆ. ಆದ್ದರಿಂದ ಅಪಘಾತಗಳ ನಿಯಂತ್ರಣ ಕೇಂದ್ರ ಸಾರಿಗೆ ಸಚಿವ ನಿತಿನ್ಘಡ್ಕರಿ ಅವರ ಆಶಯವೂ ಇದೇ ಆಗಿದೆ ಎಂದವರು ನುಡಿದರು.
ನಗರದ ಕೇಂದ್ರ ಸ್ಥಳದಿಂದ ವಿಮಾನ ನಿಲ್ದಾಣಕ್ಕೆ ಸಾರ್ವಜನಿಕ ಹಿತದೃಷ್ಟಿಯಿಂದ ಕೂಡಲೇ ಬಸ್ಸಂಪಕ ವ್ಯವಸ್ಥೆ ಕಲ್ಪಿಸಲು ಸಾರಿಗೆ ಇಲಾಖಾಧಿಕಾರಿಗಳು ತಕ್ಷಣದ ಕ್ರಮಗಳನ್ನು ಕೈಗೊಳ್ಳಬೇಕು. ಅಲ್ಲದೇ ನಗರದ ರೈಲ್ವೇ ನಿಲ್ದಾಣದ ಮುಂಭಾಗದಲ್ಲಿ ಎಲ್ಲೆಂದರಲ್ಲಿ ನಿಂತಿರುವ ಆಟೋಗಳಿಂದಾಗಿ ಸಾರ್ವಜನಿಕರಿಗೆ, ಪ್ರಯಾಣಿಕರಿಗೆ ಅನಗತ್ಯ ಕಿರಿಕಿರಿ, ಅಶಿಸ್ತು ಉಂಟಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ನಿರಂತರವಾಗಿ ಬರುತ್ತಲೇ ಇವೆ. ಆದ್ದರಿಂದ ಪಾವತಿ ಬಳಸುವ ಆಟೋ ಕೌಂಟರ್ಗಳನ್ನು ತೆರೆಯಬೇಕು. ಅದಕ್ಕಾಗಿ ಆಟೋ ಚಾಲಕರ ಸಂಘಟನೆಗಳ ಸಹಕಾರ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ ಅವರುಮ ಈ ವ್ಯವಸ್ಥೆ ಅಧಿಕೃತವಾಗಿ ಜಾರಿಯಾಗುವವರೆಗೆ ಪೊಲೀಸ್ಸಿಬ್ಬಂಧಿಯನ್ನು ನಿಯೋಜಿಸುವಂತೆ ಅವರು ಸಲಹೆ ನೀಡಿದರು.
ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಮಾರ್ಗದಲ್ಲಿ ಬರುವ ಹಾರೋಗೊಪ್ಪ ಗ್ರಾಮದ ಸಮೀಪದಲ್ಲಿ ಭಾರೀ ವಾಹನ ಅನಾಹುತಗಳ ಸಂಭವಿಸುತ್ತಲೆ ಇರುತ್ತವೆ. ಅವುಗಳ ನಿಯಂತ್ರಣಕ್ಕಾಗಿ ಲೋಕೋಪಯೋಗಿ ಇಲಾಖಾಧಿಕಾರಿಗಳು ತ್ವರಿತ ಕ್ರಮಗಳನ್ನು ಕೈಗೊಳ್ಳಬೇಕು. ಅಲ್ಲದೇ ಕೆಲವು ರಾಷ್ಟ್ರೀಯ ಹೆದ್ದಾರಿಗಳ ನಿಗಧಿತ ಪ್ರದೇಶಗಳಲ್ಲಿಯೂ ಅಪಘಾತಗಳು ಆಗುತ್ತಿರುವ ಮಾಹಿತಿ ಇದೆ. ಅವುಗಳನ್ನು ನಿಯಂತ್ರಿಸಲು ಕೂಡಲೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸೂಚಿಸಿದರು. ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಮತ್ತು ತಡಗಣಿ ಗ್ರಾಮಗಳಿಗೆ ಹೊಂದಿಕೊಂಡಂತಿರುವ ಮುಖ್ಯರಸ್ತೆಗಳೂ ಸಹ ಸಂಭವನೀಯ ಅಪಘಾತ ವಲಯಗಳೆಂದು ಪರಿಗಣಿಸಿ, ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಅವರು ಸೂಚಿಸಿದರು.
? ಈಗಾಗಲೇ ಕೆಲವು ಕಡೆ ರಸ್ತೆಗಳಲ್ಲಿ ಅಳವಡಿಸಿರುವ ಹಂಪ್ಗಳಿಗೆ ಬಣ್ಣ ಬಳಿಯದಿರುವುದರಿಂದ ಅಪಘಾತಗಳು ಸಂಭವಿಸುತ್ತಿವೆ. ಕೂಡಲೇ ಅವುಗಳಿಗೆ ಬಣ್ಣ ಬಳಿಯಿರಿ. -ಆರಗ ಜ್ಞಾನೇಂದ್ರ, ಮಾಜಿ ಸಚಿವರು.
? ಆಲ್ಕೊಳ ವರ್ತುಲದಿಂದ ಗಾಡಿಕೊಪ್ಪದವರೆಗೆ ರಸ್ತೆ ಅತ್ಯಂತ ಕಿರಿಯದಾಗಿದ್ದು, ಅಪಘಾತಗಳು ಸಂಭವಿಸುತ್ತಿವೆ. ಆ ಪ್ರದೇಶದಲ್ಲಿನ ರಸ್ತೆಯನ್ನು ವಿಸ್ತರಿಸಲು ಕ್ರಮ ಕೈಗೊಳ್ಳಬೇಕು. ರಸ್ತೆಯ ಇಕ್ಕೆಲಗಳಲ್ಲಿರುವ ದುರ್ಬಲ ಹಾಗೂ ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು. -ಎಸ್.ಎನ್.ಚನ್ನಬಸಪ್ಪ, ಶಾಸಕರು.
? ರಸ್ತೆ ದುರಸ್ತಿ, ಪೈಪ್ಲೈನ್ಅಳವಡಿಕೆ ಸೇರಿದಂತೆ ಜಿಲ್ಲೆಯ ಪ್ರಮುಖ ರಸ್ತೆಗಳ ನಿರ್ಮಾಣಕ್ಕಾಗಿ ಅಗತ್ಯವಿರುವ ಜಲ್ಲಿ ಅಥವಾ ಮರಳನ್ನು ಒದಗಿಸಲು ಪ್ರಸ್ತಾವನೆ ಸಲ್ಲಿಸಿದಲ್ಲಿ ತ್ವರಿತ ಕ್ರಮ ಕೈಗೊಳ್ಳಲಾಗುವುದು. ಗುರುದತ್ತ ಹೆಗಡೆ, ಜಿಲ್ಲಾಧಿಕಾರಿಗಳು.
? ಈಗಾಗಲೇ ಜಿಲ್ಲೆಯಲ್ಲಿ ಸುಮಾರು ೫೧ಕಪ್ಪುಸ್ಥಳಗಳನ್ನು ಗುರುತಿಸಲಾಗಿದ್ದು, ಅದರ ನಿಯಂತ್ರಣಕ್ಕಾಗಿ ಲೋಕೋಪಯೋಗಿ ಇಲಾಖೆಗೆ ಕ್ರಮಕ್ಕಾಗಿ ಮಾಹಿತಿ ನೀಡಲಾಗಿದೆ. ? ಜಿ.ಕೆ.ಮಿಥುನ್ಕುಮಾರ್, ಜಿಲ್ಲಾ ಪೊಲೀಸ್ವರಿಷ್ಟಾಧಿಕಾರಿಗಳು.
ಸಭೆಯಲ್ಲಿ ರಸ್ತೆ ನಿಯಮಗಳ ಉಲ್ಲಂಘನೆ ಪ್ರಕರಣಗಳಲ್ಲಿ ಪೊಲೀಸ್ಇಲಾಖೆ ವಿಧಿಸಿದ ದಂಡವನ್ನು ಪಾವತಿಸಲು ಕೈಗೊಳ್ಳುತ್ತಿರುವ ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನು ತರಲು ಹಾಗೂ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಬಗ್ಗೆಯೂ ಚರ್ಚಿಸಲಾಯಿತು. ಅಲ್ಲದೇ ಇದೇ ಸಂದರ್ಭದಲ್ಲಿ ರಸ್ತೆ ಸುರಕ್ಷತಾ ನಿಯಮದ ಪ್ರಚಾರ ಫಲಕಗಳನ್ನು ಮಾನ್ಯ ಸಂಸದರು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಡಿ.ಎಸ್.ಅರುಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್, ಮಹಾನಗರಪಾಲಿಕೆ ಆಯುಕ್ತೆ ಶ್ರೀಮತಿ ಕವಿತಾ ಯೋಗಪ್ಪನವರ್, ಲೋಕೋಪಯೋಗಿ ಇಲಾಖೆ ಅಭಿಯಂತರ ವಿಜಯ್ಕುಮಾರ್, ವಲಯ ಅರಣ್ಯಾಧಿಕಾರಿ ಶಿವಶಂಕರ್ಮತ್ತಿತರರು ಉಪಸ್ಥಿತರಿದ್ದರು.