ಶಿವಮೊಗ್ಗ ಜನವರಿ.01: 2024-25ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗದ ವತಿಯಿಂದ ಫೆ.02 ರ ಭಾನುವಾರದಂದು ವಿಶೇಷ ವಸೂಲಾತಿ ಕೌಂಟರ್ಗಳನ್ನು ತರೆಯಲಾಗಿದೆ.
ನೀರಿನ ಕಂದಾಯ ಮತ್ತು ಬಾಕಿ ಕರ ವಸೂಲಾತಿಗಾಗಿ ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಗುರುಪುರ ಸರ್ಕಾರಿ ಪ್ರಾಥಮಿಕ ಶಾಲೆ ಆವರಣ, ಮಂಡ್ಲಿ ಸರ್ಕಲ್ ಆಟೋ ನಿಲ್ದಾಣದ ಹತ್ತಿರ, ದ್ರೌಪದಮ್ಮ ಸರ್ಕಲ್ ಸಿಟಿಬಸ್ ನಿಲ್ದಾಣದ ಹತ್ತಿರ, ಶಾಂತಿನಗರ
ಯಲ್ಲಮ್ಮನ ದೇವಸ್ಥಾನದ ಹತ್ತಿರ ಮತ್ತು ಸೂಳೇಬೈಲ್ ಗಣಪತಿ ದೇವಸ್ಥಾನದ ಹತ್ತಿರ ವಿಶೇಷ ವಸೂಲಾತಿ ಕೌಂಟರ್ ತೆರೆದಿದ್ದು, ನೀರಿನ
ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರು ತಿಳಿಸಿದ್ದಾರೆ.
—————-