ಶಿವಮೊಗ್ಗ: ಜಿಲ್ಲಾ ಪಂಚಾಯತ್ ಹಾಗೂ ಮೀನುಗಾರಿಕೆ ಇಲಾಖೆಯ ವತಿಯಿಂದ ನಗರದ ಮೀನುಗಾರಿಕೆ ಉಪ ನಿರ್ದೇಶಕರ ಕಚೇರಿ ಆವರಣದಲ್ಲಿ 2024-25 ಸಾಲಿನ ರಾಜ್ಯ ವಲಯ ಯೋಜನೆ ಅಡಿಯಲ್ಲಿ 10 ವೃತ್ತಿಪರ ಮೀನುಗಾರರಿಗೆ ಉಚಿತವಾಗಿ ಮೀನುಗಾರಿಕೆ ಸಲಕರಣೆ
ಕಿಟ್ ಹಾಗೂ ಫೈಬರ್ ಗ್ಲಾಸ್ ಹರಿಗೋಲನ್ನು ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ವಿತರಿಸಿ, ಇಲಾಖೆ ಯೋಜನೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಮೀನುಗಾರರಿಗೆ ಸಲಹೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಎನ್ ಕೆ ಜಗದೀಶ್ ಮಾಜಿ ಮಹಾನಗರ ಪಾಲಿಕೆಯ ಸದಸ್ಯರಾದ ಪ್ರಭಾಕರ್ ಪಿ, ಇಲಾಖೆಯ ಉಪ ನಿರ್ದೇಶಕರಾದ ಶಿವಕುಮಾರ್ ಜಿ.ಎಂ., ಸಹಾಯಕ ನಿರ್ದೇಶಕ ರಾಘವೇಂದ್ರ, ಕಚೇರಿ ಅಧೀಕ್ಷಕ ಉಮಾಪತಿ ಹಾಗೂ ಸಿಬ್ಬಂದಿ ಇದ್ದರು.