ಶಿವಮೊಗ್ಗ: ವಿಶ್ವ ಕ್ಯಾನರ್ ದಿನದ ಅಂಗವಾಗಿ ಮಹಿಳಾ ಪೊಲೀಸ್ ಸಿಬ್ಬಂದಿಗಳಿಗೆ ಸ್ತನ ಕ್ಯಾನ್ಸರ್ ತಪಾಸಣಾ ಶಿಬಿರ ಸರಣಿಗೆ ಚಾಲನೆ ನೀಡಲಾಯಿತು.
ಭಾರತೀಯ ವೈದ್ಯಕೀಯ ಸಂಘ(ಐಎAಎ) ಹಾಗೂ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಲಾಗಿದೆ.
ಪೊಲೀಸ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಪಾಸಣಾ ಶಿಬಿರಕ್ಕೆ ಡಿವೈಎಸ್’ಪಿ ಬಾಬು ಅಂಜನಪ್ಪ ಚಾಲನೆ ನೀಡಿದರು.
ಜಿಲ್ಲಾ ಪೊಲೀಸ್ ಇಲಾಖೆಯಲ್ಲಿರುವ ಮಹಿಳಾ ಸಿಬ್ಬಂದಿಗಳಿಗೆ ಸ್ತನ ಕ್ಯಾನ್ಸರ್ ತಪಾಸಣೆ ಹಾಗೂ ಜಾಗೃತಿ ಮೂಡಿಸುವ ಉತ್ತಮ ಕಾರ್ಯಕ್ರಮ ಇದಾಗಿದೆ.
ಕಾರ್ಯದಲ್ಲಿ ಪೊಲೀಸ್ ಅಧಿಕಾರಿ ಭರತ್ ಕುಮಾರ್, ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಸಿ.ಎಂ. ಸಿದ್ದಲಿಂಗಪ್ಪ, ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ಬಾಲು, ಐಎಂಎ ಶಿವಮೊಗ್ಗ ಅಧ್ಯಕ್ಷ ಡಾ.ಶ್ರೀಧರ್, ಕಾರ್ಯದರ್ಶಿ ಡಾ.ವಿನಯ ಶ್ರೀನಿವಾಸ್, ಡಾ.ಸ್ವಾತಿ ಸೇರಿದಂತೆ ಹಲವರು ಇದ್ದರು.