ಸಾಗರ : ಆನಂದಪುರದ ತ್ಯಾಗರ್ತಿಯ ಚಿಕ್ಕ ಬಿಲಗುಂಜಿ ಗ್ರಾಮದ ಪ್ರಜ್ವಲ್(20) ಎಂಬಾತ ಬೈಕ್ ಅಪಘಾತದಲ್ಲಿ ಮೃತ ಪಟ್ಟ ಘಟನೆ ನಡೆದಿದೆ.

ತ್ಯಾಗರ್ತಿ ಮಾರಿಕಾಂಬಾ ಜಾತ್ರೆಗೆ ಪ್ರಜ್ವಲ್ ರವರ ಮನೆಗೆ ಬಂದಿದ್ದ ಸಂಬಂಧಿಕರನ್ನು ರಾತ್ರಿ ಊರಿಗೆ ಬಿಟ್ಟು ಬರುವ ಸಂದರ್ಭದಲ್ಲಿ ಕಾಸ್ಪಾಡಿ ಬಳಿ ಬೈಕ್ ಅಪಘಾತಗೊಂಡ ಘಟನೆ ಬುಧವಾರ ರಾತ್ರಿ 12 ಗಂಟೆ ಸುಮಾರಿಗೆ ನಡೆದಿದೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕನನ್ನು ಕೂಡಲೇ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿರುವ ಬಗ್ಗೆ ತಿಳಿದು ಬಂದಿದೆ.
ಪ್ರಕರಣ ಆನಂದಪುರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.