![ass](https://tungataranga.com/wp-content/uploads/2025/02/ass.jpg)
ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಹುಚ್ಚಂಗಿಪುರ ಗ್ರಾಮದ “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ” ನೂತನ ಸುಸುರ್ಜಿತ ಭವ್ಯವಾದ ಶಾಲಾ ಕಟ್ಟಡವನ್ನು ಲೋಕಾರ್ಪಣೆ ಮಾಡಲಾಯಿತು.
ಬಳಿಕ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪನವರು ಮಾತನಾಡಿದರು. ಆತ್ಮೀಯರು
ವಿಧಾನಪರಿಷತ್ ಸದಸ್ಯರಾದ ಶ್ರೀ ಎನ್.ರವಿಕುಮಾರ್ ಅವರು ತನ್ನ ಹುಟ್ಟೂರಿನ ಸರ್ಕಾರಿ ಶಾಲೆಯನ್ನು ದತ್ತು ಪಡೆದು ವಿವಿಧ ಅನುದಾನಗಳನ್ನು ಬಳಸಿಕೊಂಡು ಸುಮಾರು ₹3.5 ಕೋಟಿ ವೆಚ್ಚದಲ್ಲಿ ಭವ್ಯವಾದ ಹಾಗೂ ಸಕಲ ಸವಲತ್ತುಗಳನ್ನು ಒಳಗೊಂಡ ಶಾಲೆಯನ್ನು ನಿರ್ಮಿಸಿದ್ದಾರೆ. “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಎಂಬ ವಿನೂತನ ಯೋಜನೆಗೆ ಪುಷ್ಠಿನೀಡಿ ಶಕ್ತಿ ತುಂಬಿದಂತಾಗಿದೆ. ಇಂತಹ ಕಾರ್ಯಗಳು ನಮ್ಮೆಲ್ಲರಿಗೂ ಮಾದರಿಯಾಗಿದೆ. ಅವರ ಕಾಳಜಿಯ ಕಾರ್ಯಕ್ಕೆ ನನ್ನ ಕಡೆಯಿಂದ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದರು.
![](http://tungataranga.com/wp-content/uploads/2023/04/Screenshot_2023_0226_070755-1.jpg)
ಗ್ರಾಮಸ್ಥರು ಹಾಗೂ ಶಿಕ್ಷಕ ವೃಂದದವರು ಪ್ರೌಢಶಾಲೆಯನ್ನು ತೆರೆಯುವಂತೆ ಈ ವೇಳೆ ಮನವಿ ಮಾಡಿದರು. ಅವರ ಮನವಿಗೆ ಸ್ಥಳದಲ್ಲಿಯೇ ಸ್ಪಂದಿಸಿ 8ನೇ ತರಗತಿಯನ್ನು ಪ್ರಾರಂಭಿಸುವುದಾಗಿ ಘೋಷಿಸಿದರು.
![](http://tungataranga.com/wp-content/uploads/2025/02/IMG-20250205-WA0022.jpg)
ಅನಕ್ಷರತೆ ತಾಂಡವಾಡುತ್ತಿರುವ ಗ್ರಾಮದಲ್ಲಿರುವ ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ದೃಷ್ಟಿಕೋನ ನಮ್ಮ ಸರ್ಕಾರದ್ದಾಗಿದೆ. ಗುಣಾತ್ಮಕ ಶಿಕ್ಷಣ ನೀಡುವ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಿಗೆ ಇನ್ನಷ್ಟು ಒತ್ತುನೀಡಿ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶ್ರೀ ಗಂಗಾಧರ ಸ್ವಾಮಿ ಜಿ.ಎಂ, ವಿಧಾನಪರಿಷತ್ ಸದಸ್ಯರಾದ ಶ್ರೀ ಚಿದಾನಂದ ಎಂ ಗೌಡ, ಶ್ರೀ ಎಸ್.ವಿ ಸಂಕನೂರು, ಸ್ಥಳೀಯ ಶಾಸಕರಾದ ಶ್ರೀ ಬಿ.ದೇವೇಂದ್ರಪ್ಪ, ಉಪನಿರ್ದೇಶಕರಾದ ಶ್ರೀ ಜಿ. ಕೊಟ್ರೇಶ್ ಸೇರಿದಂತೆ ಜನಪ್ರತಿನಿಧಿಗಳು, ಮುಖಂಡರು, ಶಾಲಾ ಸಿಬ್ಬಂದಿ ವರ್ಗ, ಎಸ್.ಡಿ.ಎಂ.ಸಿ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.