![IMG-20250207-WA0129](https://tungataranga.com/wp-content/uploads/2025/02/IMG-20250207-WA0129.jpg)
ಶಿವಮೊಗ್ಗ ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಅಧೀನ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿಯಿರುವ 13 ತುರ್ತು ಚಿಕಿತ್ಸಾ ವೈದ್ಯರು/ಅಪಘಾತ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಅಧಾರದಲ್ಲಿ ನೇಮಕ ಮಾಡಲು ಅರ್ಹ ಎಂ.ಬಿ.ಬಿ.ಎಸ್. ಪದವೀಧರ ವೈದ್ಯರುಗಳ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳ ಒಂದು ಸೆಟ್ ನಕಲು ಮತ್ತು ಮೂಲ ಪ್ರತಿಗಳು, ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ಫೆ. 12 ರಂದು ಬೆಳಿಗ್ಗೆ 11.00 ರಿಂದ ಮ. 1.00 ರವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಬಿ.ಹೆಚ್.ರಸ್ತೆ, ಶಿವಮೊಗ್ಗ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಆ &ಕು.ಕ.ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
![](https://tungataranga.com/wp-content/uploads/2025/02/IMG-20250206-WA00161-1-1024x521.jpg)
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-222382 ನ್ನು ಸಂಪರ್ಕಿಸುವುದು.
ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ
ಶಿವಮೊಗ್ಗ ಜಿಲ್ಲೆಯ 2024-25ನೇ ಸಾಲಿನ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ತೀರ್ಥಹಳ್ಳಿ ತಾಲೂಕಿನ ದೇವಂಗಿ ರೈತ ಸಂಪರ್ಕ ಕೇಂದ್ರದಲ್ಲಿ ಖಾಲಿಯಿರುವ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ 45 ವರ್ಷ ವಯೋಮಿತಿಯುಳ್ಳ ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಪದವಿ ಹೊಂದಿರುವವರಿಂದ ಅರ್ಜಿ ಆಹ್ವಾನಿಸಿದೆ.
![](https://tungataranga.com/wp-content/uploads/2023/04/Screenshot_2023_0226_070755-1.jpg)
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರು, ಶಿವಮೊಗ್ಗ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸ್ವವಿವರಗಳೊಂದಿಗೆ ಪದವಿ ಪ್ರಮಾಣ ಪತ್ರ, ಅಂತಿಮ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಸೇವಾ ಅನುಭವ ಪ್ರಮಾಣ ಪತ್ರಗಳನ್ನು ಲಗತ್ತಿಸಿ ಫೆ. 15 ರೊಳಗಾಗಿ ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಹಳೇ ತೀರ್ಥಹಳ್ಳಿ ರಸ್ತೆ, ಶಿವಮೊಗ್ಗ ಇಲ್ಲಿಗೆ ಸಲ್ಲಿಸುವಂತೆ ಯೋಜನಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
SHIMOGGA JOB NEWS | ತುರ್ತು ಚಿಕಿತ್ಸಾ ವೈದ್ಯರ ನೇರ ಸಂದರ್ಶನಕ್ಕೆ ಆಹ್ವಾನ | ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ತಾತ್ಕಾಲಿಕ ಹುದ್ದೆಗೆ ಅರ್ಜಿ