![photo (3)](https://tungataranga.com/wp-content/uploads/2025/02/photo-3.jpg)
ಜಿಲ್ಲಾಡಳಿತ ಚಿತ್ರದುರ್ಗ ಹಾಗೂ ಶಾಲಾ ಶಿಕ್ಷಣ ಇಲಾಖೆ ಚಿದುರ್ಗ ಇವರ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 7 ಮತ್ತು 8ರಂದು ಆಯೋಜಿಸಿದ್ದ, ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆಯ ಶ್ರೀ ಆದಿಚುಂಚನಗಿರಿ ಸಂಯುಕ್ತ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ಹತ್ತನೇ ತರಗತಿಯ ಸಹಿಷ್ಣು ಎನ್., ಒಂಬತ್ತನೇ ತರಗತಿಯ ದೀಕ್ಷಿತ್ ಎಂ. ಎನ್. ಈ ಪ್ರತಿಭಾನ್ವಿತರು ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ, ಮೊದಲ ಸುತ್ತಿನಿಂದ ಅಂತಿಮ ಸುತ್ತಿನವರೆಗೂ ಉತ್ತಮ ಚಾಣಾಕ್ಷತೆ, ಬುದ್ದಿವಂತಿಕೆಯಿಂದ ಭಾಗವಹಿಸಿ, ದ್ವಿತೀಯ ಸ್ಥಾನ ಪಡೆದು, ಪ್ರಶಸ್ತಿ ಪತ್ರ ಮತ್ತು ಅತ್ಯಾಕರ್ಷಕ ಟ್ರೋಪಿಯನ್ನು ಸಂಸ್ಥೆಯ ಮಡಿಲಿಗೆ ತಂದುಕೊಟ್ಟು, ಜಿಲ್ಲೆ, ಹಾಗೂ ರಾಜ್ಯಕ್ಕೂ ಕೀರ್ತಿ ತಂದುಕೊಟ್ಟಿರುತ್ತಾರೆ.
![](http://tungataranga.com/wp-content/uploads/2023/04/Screenshot_2023_0226_070755-1.jpg)
ಸಹಿಷ್ಣು ಎನ್. ನಗರದ ಮಂಜುನಾಥ್ ನಾಡಿಗ್ ಹಾಗು ಶಿಲ್ಪಾ ದಂಪತಿಗಳ ಪುತ್ರ. ಹಾಗು ದೀಕ್ಷಿತ್ ಎಂ. ಎನ್.ನಗರದ ನಾಗರಾಜ್ ಮತ್ತು ಪ್ರತಿಮಾ ದಂಪತಿಗಳ ಪುತ್ರ.
![](http://tungataranga.com/wp-content/uploads/2025/02/Screenshot_2025_0125_172302-667x1024.jpg)
ಈ ಪ್ರತಿಭಾನ್ವಿತ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡಲಿ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು,ಪೂಜ್ಯ ಶ್ರೀ ಸಾಯಿನಾಥ ಸ್ವಾಮೀಜಿಯವರು, ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರಾದ ದಿವ್ಯ ಕರಣಮ್ ಹಾಗೂ ಅಧ್ಯಾಪಕ ವೃಂದದವರು, ಸಿಬ್ಬಂದಿವರ್ಗದವರು ಮತ್ತು ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.