![973059-anganwadi-080418](https://tungataranga.com/wp-content/uploads/2025/02/973059-anganwadi-080418-1024x576.jpg)
ಶಿವಮೊಗ್ಗ ಫೆಬ್ರವರಿ 12:: ಶಿವಮೊಗ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಭದ್ರಾವತಿ ತಾಲೂಕು ಹೊರತುಪಡಿಸಿ ಉಳಿದ 06 ತಾಲೂಕುಗಳಲ್ಲಿ ಖಾಲಿಯಿರುವ 116 ಅಂಗನವಾಡಿ ಕಾರ್ಯಕರ್ತೆ ಮತ್ತು 360 ಸಹಾಯಕಿ ಹುದ್ದೆಗಳಿಗೆ ಪರಿಷ್ಕೃತ ತಾತ್ಕಾಲಿಕ ಆಯ್ಕೆ
![](http://tungataranga.com/wp-content/uploads/2023/04/Screenshot_2023_0226_070755-1.jpg)
ಪಟ್ಟಿಯನ್ನು ಸಂಬಂಧಿಸಿದ ಅಂಗನವಾಡಿ ಕೇಂದ್ರ, ಗ್ರಾಮ ಪಂಚಾಯತಿ, ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ ಫೆ 20 ರೊಳಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
![](http://tungataranga.com/wp-content/uploads/2025/02/IMG_20250125_140735-1-424x1024.jpg)
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವುದು.