![police news](https://tungataranga.com/wp-content/uploads/2023/05/police-news.jpg)
ಶಿವಮೊಗ್ಗ: ಕಾರ್ಗಲ್ ಟೌನ್ ಕೆನರಾ ಬ್ಯಾಂಕ್ ಎಟಿಎಂನಲ್ಲಿ ವೃದ್ಧನನ್ನು ವಂಚಿಸಿದ್ದ ಆರೋಪಿಗಳನ್ನು ಕಾರ್ಗಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
![](http://tungataranga.com/wp-content/uploads/2023/04/Screenshot_2023_0226_070755-1.jpg)
2024ರ ಅಕ್ಟೋಬರ್ನಲ್ಲಿ ವೃದ್ಧನ ವಂಚಿಸಿ ಎಟಿಎಂ ಪಿನ್ ಪಡೆದು 1.49 ಲಕ್ಷ ರೂ. ಡ್ರಾ ಮಾಡಿಕೊಂಡಿರುವ ಬಗ್ಗೆ ಕಾರ್ಗಲ್ ಠಾಣೆಯಲ್ಲಿ ಬಿ.ಎನ್.ಎಸ್. ಕಾಯ್ದೆ ರೀತ್ಯ ಪ್ರಕರಣ ದಾಖಲಾಗಿತ್ತು. ಮೇಲಾಧಿಕಾರಿಗಳ ಮಾರ್ಗದರ್ಶನದ ಮೇರೆಗೆ ಈ ಪ್ರಕರಣ ಭೇದಿಸಲು ವಿಶೇಷ ತನಿಖಾ ತಂಡ ರಚಿಸಲಾಗಿತ್ತು.
![](http://tungataranga.com/wp-content/uploads/2025/02/IMG_20250125_140612-1.jpg)
ಸದರಿ ತನಿಖಾ ತಂಡವು ಫೆ. 11ರಂದು ಈ ಪ್ರಕರಣದ ಆರೋಪಿಗಳಾದ ಹರಿಯಾಣದ ಜೋಗಿಂದರ್, ಮುಕೇಶ್ ಅವರನ್ನು ಬಂಧಿಸಿದೆ. ಕಾರ್ಗಲ್ ಮತ್ತು ಶಿರಾಳಕೊಪ್ಪ ಪೊಲೀಸ್ ಠಾಣೆಗಳಲ್ಲಿ ವರದಿಯಾದ ಎರಡು ಎಟಿಎಂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 1 ಲಕ್ಷ ರೂ. ನಗದು ಮತ್ತು ಕೃತ್ಯಕ್ಕೆ ಬಳಸಿದ ಅಂದಾಜು 2 ಲಕ್ಷ ರೂ. ಮೌಲ್ಯದ ರಾಯಲ್ ಎನ್ಫೀಲ್ಡ್ ಬೈಕ್ ವಶಪಡಿಸಿಕೊಂಡಿದ್ದಾರೆ.