ಶಿವಮೊಗ್ಗ: ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಹುಟ್ಟು ಹಬ್ಬದ ಅಂಗವಾಗಿ ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದಲ್ಲಿ ಮಹಿಳೆಯರಿಗೆ ಹಣ್ಣು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಎನ್.ಎಸ್.ಯು.ಐ. ಜಿಲ್ಲಾಧ್ಯಕ್ಷ ವಿಜಯ್, ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಹರ್ಷಿತ್ ಗೌಡ, ಆಶ್ರಯ ಸಮಿತಿ ಸದಸ್ಯರಾದ

ಯಮನ ರಂಗೇಗೌಡ, ಪ್ರಮುಖರಾದ ಚೇತನ್, ಮಧುಸೂದನ್, ಅಬ್ದುಲ್ ಸತ್ತಾರ್, ಸಕ್ಲೇನ್, ವರುಣ್, ಗೌತಮ್ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.