ಶಿವಮೊಗ್ಗ : ಯುವಕ, ಯುವತಿಯ ವಿಡಿಯೋ ಚಿತ್ರೀಕರಣ ಮಾಡಿಕೊಂಡು
ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದ ಸಂಬಂಧ ಪ್ರಕರಣ ದಾಖಲಾಗಿದೆ.

ಯುವಕ ಮತ್ತು ಯುವತಿ ಬೈಕಿನಲ್ಲಿ ಸಕ್ರೆಬೈಲಿನ ಹೊಟೇಲ್ ಒಂದಕ್ಕೆ ಊಟಕ್ಕೆ ತೆರಳಿದ್ದಾಗ ಘಟನೆ
ಸಂಭವಿಸಿದೆ.
ಯುವಕ ಊಟದ ಕೊಠಡಿಯಲ್ಲಿ ಬಿಯರ್ ಬಾಟಲಿ ಇಟ್ಟುಕೊಂಡಿದ್ದ.
ಆ ಸಂದರ್ಭ ಅಲ್ಲಿಗೆ ಬಂದ ನಾಲ್ವರು ಅಪರಿಚಿತರು ವಿಡಿಯೋ ಚಿತ್ರೀಕರಣ ಮಾಡಿದ್ದಾರೆ.

ಬಳಿಕ ಯುವಕ ಮತ್ತುಯುವತಿಯನ್ನು ಬಲವಂತವಾಗಿ ಆಟೋದಲ್ಲಿಶಿವಮೊಗ್ಗಕ್ಕೆ ಕರೆತಂದು
ವಿವಿಧೆಡೆ ಸುತ್ತಾಡಿಸಿದ್ದಾರೆ.

ಹಣ ಕೊಡದೆ ಇದ್ದರೆ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಸಲಾಗಿದೆ.
ಈ ಘಟನೆ ಸಂಬಂಧಿಸಿದಂತೆ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ