ಶಿವಮೊಗ್ಗ ಫೆಬ್ರವರಿ.21 : 2024-25ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗದ ವತಿಯಿಂದ ಫೆ.23 ರ ಭಾನುವಾರದಂದು ವಿಶೇಷ ವಸೂಲಾತಿ ಕೌಂಟರ್ಗಳನ್ನು ತರೆಯಲಾಗಿದೆ.

ನೀರಿನ ಕಂದಾಯ ಮತ್ತು ಬಾಕಿ ಕರ ವಸೂಲಾತಿಗಾಗಿ ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಬಾಪೂಜಿನಗರ ಮುಖ್ಯರಸ್ತೆ ರಾಮಮಂದಿರ ಹತ್ತಿರದಲ್ಲಿರುವ ಡಾ. ಅಂಬೇಡ್ಕರ್ ಪಾರ್ಕ್ ಹತ್ತಿರ, ಟಿಪ್ಪುನಗರ ಅಲ್ ಹಬೀಬ್ ಶಾಲೆ ಹತ್ತಿರ, ವಿನೋಬನಗರ ಪೊಲೀಸ್ ಠಾಣೆ ಎದುರು,ಪೊಲೀಸ್ ಚೌಕಿ , ರಾಮಣ್ಣಶ್ರೇಷ್ಠಿ ಪಾರ್ಕ್ ಹತ್ತಿರ ಗಾಂಧಿಬಜಾರ್, ಸೋಮಿನಕೊಪ್ಪ ಮುಖ್ಯರಸ್ತೆ ಪಂಚಮುಖಿ

ಆಂಜನೇಯಸ್ವಾಮಿ ದೇವಸ್ಥಾನದ ಹತ್ತಿರ ವಿಶೇಷ ವಸೂಲಾತಿ ಕೌಂಟರ್ ತೆರೆದಿದ್ದು, ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರು ತಿಳಿಸಿದ್ದಾರೆ.