
ಶಿವಮೊಗ್ಗ :ಫೆ, 26, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಶಿವಮೊಗ್ಗ ಶಾಖೆಯ ವತಿಯಿಂದ, ಗುರುಪುರದಲ್ಲಿರುವ ಪುರಾತನ ಕಾಲದ ಶ್ರೀವೀರ ಸೋಮೇಶ್ವರ ಸನ್ನಿಧಾನದಲ್ಲಿ


ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಆದಿಚುಂಚನಗಿರಿ ಶಿವಮೊಗ್ಗ ಶಾಖೆಯ ಪೂಜ್ಯ ಶ್ರೀ ಶ್ರೀ ಸಾಯಿನಾಥ ಸ್ವಾಮೀಜಿಯವರ ಸಾನಿಧ್ಯದಲ್ಲಿ

ಪಂಚಾಮೃತ ಅಭಿಷೇಕ, ರುದ್ರಾಭಿಷೇಕ ಹಾಗೂ ಬಿಲ್ವಪತ್ರೆ, ಪುಷ್ಪಗಳಿಂದ ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯಗಳನ್ನು ಪೂಜ್ಯರಿಂದ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಶಾಲೆ ಮತ್ತು ಕಾಲೇಜಿನ ಪ್ರಾಂಶುಪಾಲರಾದ ಸುರೇಶ್ ಎಸ್. ಹೆಚ್., ಶಿಕ್ಷಕರು ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಹಾಗೂ ಶ್ರೀಮಠದ ಸದ್ಭಕ್ತರು ಪಾಲ್ಗೊಂಡಿದ್ದರು