ಶಿವಮೊಗ್ಗ, ಮಾ.03:
ಚಿತ್ರದುರ್ಗದ ಶ್ರೀ ಮುರುಘರಾಜೇಂದ್ರ ಬೃಹನ್ಮಠದ ಇಪ್ಪತೈದು ವರ್ಷದ ಹೆಣ್ಣಾನೆ (ಕನೇನಿ)ಯನ್ನು ಸರ್ಕಾರದ ಅನುಮತಿಯೊಂದಿಗೆ ಸಂತಾನೋತ್ಪತ್ತಿಗಾಗಿ ನಾಕೈದು ತಿಂಗಳ ಅವಧಿಗೆ ಶಿವಮೊಗ್ಗದ ಸಕ್ರೆಬೈಲು ಆನೆಬಿಡಾರಕ್ಕೆ ಅದ್ಧೂರಿಯಾಗಿ ಕಳುಹಿಸಿಕೊಡಲಾಯಿತು.
ಡಾ. ಶಿವಮೂರ್ತಿ ಮುರುಘಾ ಶರಣರು ಆನೆಗೆ ಬಾಳೆಹಣ್ಣು, ಬೆಲ್ಲ, ಕಬ್ಬನ್ನು ತಿನ್ನಿಸುವುದರ ಮೂಲಕ ಬೀಳ್ಕೊಟ್ಟರು.
ಈ ಸಂದರ್ಭದಲ್ಲಿ ಸಹಾಯಕ ಅರಣ್ಯಾಧಿಕಾರಿ ಮಂಜುನಾಥ್, ಶಿವಮೊಗ್ಗ ವನ್ಯಜೀವಿ ವಿಭಾಗದ ಡಾ. ವಿನಯ್, ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ. ಕೃಷ್ಣಪ್ಪ, ಡಾ. ಪ್ರಸನ್ನಕುಮಾರ್, ಡಾ. ಕುಮಾರ್, ಡಾ. ತಿಪ್ಪೇಸ್ವಾಮಿ, ಎಸ್.ಜೆ.ಎಂ. ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ.ಪರಮಶಿವಯ್ಯ, ಪಟೇಲ್ ಶಿವಕುಮಾರ್ ಹಾಗು ಭಕ್ತರು ಉಪಸ್ಥಿತರಿದ್ದರು.



