ವಮೊಗ್ಗ: ನಂಜಪ್ಪ ಆಸ್ಪತ್ರೆ, ನಂಜಪ್ಪ ಲೈಫ್ ಕೇರ್ ಸಹಯೋಗದೊಂದಿಗೆ ಇಲ್ಲಿನ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಕ್ಯಾನ್ಸರ್ ರೋಗದ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಕ್ಯಾನ್ಸರ್ ಚಿಕಿತ್ಸೆ ಬಗ್ಗೆ ನಂಜಪ್ಪ ಲೈಫ್ ಕೇರ್ ನ ತಜ್ಞೆ ಡಾ. ನಮ್ರತಾ ಉಡುಪ ಹಾಗೂ ಸ್ತ್ರೀರೋಗ ನೈರ್ಮಲ್ಯದ (ಸ್ತ್ರೀರೋಗ ಆರೋಗ್ಯ) ಬಗ್ಗೆ ನಂಜಪ್ಪ ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞೆ ಡಾ.ವಿಶಾಲಾಕ್ಷಿ ಮೂಗಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರಲ್ಲಿ ಜಾಗೃತಿ ಮೂಡಿಸಿದರು.

ಡಾ.ನಮ್ರತಾ ಉಡುಪ ಮಾತನಾಡಿ, ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿದರೆ ಗುಣಪಡಿಸುವ ಸಾಧ್ಯತೆ ಹೆಚ್ಚು. ಭಾರತೀಯ ಮಹಿಳೆಯರು ಗರ್ಭಕಂಠದ ಕ್ಯಾನ್ಸರ್ಗೆ ಹೆಚ್ಚು ತುತ್ತಾಗಿದ್ದಾರೆ. 9ರಿಂದ 45 ವರ್ಷ ವಯಸ್ಸಿನ ಮಹಿಳೆಯರು ಎಚ್ಪಿವಿ ಲಸಿಕೆಗೆ ಅರ್ಹರಿರುತ್ತಾರೆ.
ಈಗಿನ ತಂತ್ರಜ್ಞಾನವು ಬಹಳ ಮುಂದುವರೆದಿದ್ದು ಕ್ಯಾನ್ಸರ್ ಚಿಕಿತ್ಸೆಗೆ ಬೇಕಾದಂತಹ ಎಲ್ಲ ಸೌಲಭ್ಯಗಳು ಈಗ ನಂಜಪ್ಪ ಲೈಫ್ ಕೇರ್ನಲ್ಲಿ ದೊರಕುತ್ತಿದೆ ಎಂಬುದರ ಬಗ್ಗೆ ಮಾಹಿತಿ ನೀಡಿದರು.
ಡಾ.ವಿಶಾಲಾಕ್ಷಿ ಮೂಗಿ ಮಾತನಾಡಿ, ಹೆಣ್ಣುಮಕ್ಕಳಲ್ಲಿ ಬರುವಂತಹ ಮುಟ್ಟಿನ ಸಮಸ್ಯೆಗಳ ಬಗ್ಗೆ ಹಾಗೂ ಸ್ತ್ರೀಯರ ಆರೋಗ್ಯದ ರಕ್ಷಣೆ ಮತ್ತು ಸ್ವಚ್ಛತೆಯ ಬಗ್ಗೆ ಮತ್ತು ಸ್ತನ ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಲು ಮ್ಯಾಮೊಗ್ರಫಿ ಹಾಗೂ ಸೆರ್ವಿಕಲ್ ಕ್ಯಾನ್ಸರ್ ಪತ್ತೆ ಹಚ್ಚಲು ಪಾಪ್ಸ್ಮಿಯರ್ ಟೆಸ್ಟ್ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಎಟಿಎನ್ಸಿಸಿ ಕಾಲೇಜಿನ ಪ್ರಾಂಶುಪಾಲೆ ಮಮತಾ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.