ಶಿವಮೊಗ್ಗ: ಕರ್ನಾಟಕ ರಾಜ್ಯ ಪೊಲೀಸ್ ಓಟ ೨೦೨೪ರ ಯಶಸ್ಸಿನ ಹಿನ್ನೆಲೆಯಲ್ಲಿ ೨ನೇ ಆವೃತ್ತಿಯ ಕರ್ನಾಟಕ ರಾಜ್ಯ ಪೊಲೀಸ್ ಓಟವನ್ನು ನಮ್ಮ ಪೊಲೀಸ್ ನಮ್ಮ ಹೆಮ್ಮೆ, ಎಲ್ಲರಿಗಾಗಿ ಫಿಟ್ ನೆಸ್ ಮತ್ತು ಮಾದಕ ದ್ರವ್ಯ ಮುಕ್ತ ಕರ್ನಾಟಕ ಧ್ಯೇಯ ವಾಕ್ಯದೊಂದಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಮಾ. ೯ ರಂದು ಬೆಳಗ್ಗೆ ೬ ಗಂಟೆಗೆ ಶಿವಮೊಗ್ಗ ನಗರದಲ್ಲಿ ಮಹಿಳೆಯರು ಮತ್ತು ಪುರು?ರಿಗಾಗಿ ೫ಕೆ ಮತ್ತು ಪುರು?ರಿಗಾಗಿ ೧೦ಕೆ ಮ್ಯಾರಥಾನ್ ಓಟವನ್ನು ಹಮ್ಮಿಕೊಳ್ಳಲಾಗಿದೆ.
೫ಕೆ ಮ್ಯಾರಥಾನ್ ಓಟವನ್ನು ಡಿಎಆರ್ ಪೊಲೀಸ್ ಕವಾಯತು ಮೈದಾನದಿಂದ ಪ್ರಾರಂಭಿಸಿ, ಅಶೋಕ ವೃತ್ತ, ಅಮೀರ್ ಅಹಮ್ಮದ್ ವೃತ್ತ, ಶಿವಪ್ಪ ನಾಯಕ ವೃತ್ತ, ಕರ್ನಾಟಕ ಸಂಘ ವೃತ್ತ, ಡಿವಿಎಸ್ ವೃತ್ತ, ಮಹಾವೀರ ವೃತ್ತ, ಶಿವಮೂರ್ತಿ ವೃತ್ತ, ಜೈಲ್ ವೃತ್ತ, ಐಬಿ ವೃತ್ತದ ಮುಖಾಂತರ ಡಿಎಆರ್ ಪೊಲೀಸ್ ಕವಾಯತು ಮೈದಾನಕ್ಕೆ ಬಂದು ಮುಕ್ತಾಯ ಮಾಡಲಾಗುದು. ೧೦ಕೆ ಮ್ಯಾರಥಾನ್ ಓಟವನ್ನು ಇದೇ ಮಾರ್ಗದಲ್ಲಿ ೨ ಸುತ್ತುಗಳು ಓಡಿ ಡಿಎಆರ್ ಪೊಲೀಸ್ ಕವಾಯತು ಮೈದಾನದಲ್ಲಿ ಮುಕ್ತಾಯವಾಗಲಿದೆ.

ಈ ಮ್ಯಾರಥಾನ್ ಓಟದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ನ ಅಧಿಕಾರಿ ಮತ್ತು ಸಿಬ್ಬಂದಿಗಳು, ಕೆ.ಎಸ್.ಆರ್.ಪಿ ೮ನೇ ಪಡೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು, ಕೆ.ಎಸ್.ಐ.ಎಸ್.ಎಫ್ ಶಿವಮೊಗ್ಗದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು, ರೈಲ್ವೇ ಪೊಲೀಸ್ ಹಾಗೂ ಯುವಜನ ಮತ್ತು ಕ್ರೀಡಾ ಇಲಾಖೆ, ಎನ್.ಎಸ್.ಎಸ್ / ಎನ್.ಸಿ.ಸಿ, ಶಿವಮೊಗ್ಗ ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳು ವಿಧ್ಯಾರ್ಥಿಗಳು ಮತ್ತು ಶಿವಮೊಗ್ಗ ಜಿಲ್ಲೆಯ ವಿವಿಧ ಇಲಾಖೆಗಳ ಸರ್ಕಾರಿ ನೌಕರರು ಭಾಗವಹಿಸಲಿದ್ದು, ಇವರೊಂದಿಗೆ ಮ್ಯಾರಥಾನ್ ಓಟದಲ್ಲಿ ಭಾಗವಹಿಸಲು ಇಚ್ಚೆಯುಳ್ಳ ಸಾರ್ವಜನಿಕರು ಸಹ ಭಾಗವಹಿಸಬಹುದಾಗಿದೆ.
ಮ್ಯಾರಥಾನ್ ಓಟದಲ್ಲಿ ಭಾಗವಹಿಸಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆಯುವ ಪುರು? ಮತ್ತು ಮಹಿಳಾ ಓಟಗಾರರಿಗೆ, ನಗದು ಬಹುಮಾನ, ಪ್ರಶಂಸನಾ ಪತ್ರ ಮತ್ತು ಪದಕಗಳನ್ನು ನೀಡಲಾಗುವುದು.

ಮ್ಯಾರಥಾನ್ ಓಟದಲ್ಲಿ ಭಾಗವಹಿಸಲು ಇಚ್ಚೆಯುಳ್ಳವರು ಈ ಕೆಳಕಂಡ ಕ್ಯೂ.ಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿ, ಮಾ. ೮ ರಂದು ಮಧ್ಯಾಹ್ನ ೨ ಗಂಟೆಯ ಒಳಗಾಗಿ ನೋಂದಣಿ ಮಾಡಿಕೊಳ್ಳುವುದು. ಹೆಚ್ಚಿನ ಮಾಹಿತಿಗಾಗಿ ಸಂತೋ? ಕುಮಾರ್, ಸಿಪಿಐ ಶಿವಮೊಗ್ಗ ಸಂಚಾರ ವೃತ್ತ, ಮೊಬೈಲ್ ನಂಬರ್ ೯೪೮೦೮೦೩೩೦೯ ಮತ್ತು ಸತ್ಯನಾರಾಯಣ್, ಪಿಐ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ಮೊಬೈಲ್ ನಂಬರ್ ೯೪೮೦೮೦೩೩೩೨ ಮತ್ತು ಶಿವಮೊಗ್ಗ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ ಮೊಬೈಲ್ ನಂಬರ್ ೯೪೮೦೮೦೩೩೦೦ ಗೆ ಸಂಪರ್ಕಿಸಬಹುದಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.