ಶಿವಮೊಗ್ಗ:
ಶಿವಮೊಗ್ಗದ ಕೇಂದ್ರ ಕಾರಾಗೃಹ (ಜೈಲ್ )ದಲ್ಲಿ 7 ವರ್ಷ ಕಾರಾಗೃಹ ಶಿಕ್ಷೆ ಅನುಭವಿಸುತ್ತಿದ್ದ ಖೈದಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.
ದಕ್ಷಿಣ ಕನ್ನಡ ಜಿಲ್ಲೆಯ ಬಾರೆಬೈಲು ಗ್ರಾಮದ ನಿವಾಸಿ ಜಗದೀಶ್ ಶೆಟ್ಟಿ ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲದಲ್ಲಿ ಶಿಕ್ಷೆಯಾಗಿತ್ತು.
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 304 ಪಾರ್ಟ್-01 ಸೆಕ್ಷನ್ ಅಡಿ 7 ವರ್ಷ ಕಾರಾಗೃಹ ವಾಸ 10 ಸಾವಿರ ರೂ.ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿತ್ತು.
ಕಳೆದ ಎರಡು ವರ್ಷದಿಂದ ಶಿವಮೊಗ್ಗ ಜೈಲಿನಲ್ಲಿ ಖೈದಿಯಾಗಿದ್ದ ಜಗದೀಶ್ ಇಂದು ಅಗರ್ ಬತ್ತಿ ವಿಭಾಗದಲ್ಲಿ ಕೆಲಸ ಮಾಡುವಾಗ ಕುಸಿದು ಬಿದ್ದಿದ್ದಾನೆ. ಮೆಗ್ಗಾನ್ ಗೆ ಸಾಗಿಸುವಾಗ ಮಾರ್ಗ ಮಧ್ಯೆಯಲ್ಲಿ ಆತ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ದೃಢಪಡಿಸಿದ್ದಾರೆ.
ಈ ಸಂಬಂಧ ತುಂಗಾ ಠಾಣೆಗೆ ಪ್ರಕರಣ ದಾಖಲಾಗಿದೆ.

