
ಶಿವಮೊಗ್ಗ: ಸಚಿವ ಮಧು ಬಂಗಾರಪ್ಪ ಅವರು ಇಂದು ಸೊರಬ ತಾಲೂಕಿನ ಚಂದ್ರಗುತ್ತಿಯೊಲ್ಲಿ ಮಲೆನಾಡ ಆರಾಧ್ಯ ದೇವತೆ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ದೇವಿ ದರ್ಶನ ಪಡೆದು ವಿಶೇ? ಪೂಜೆ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು, ನನ್ನ ಮತಕ್ಷೇತ್ರ ಸೊರಬ ತಾಲೂಕಿನ ಪುರಾಣ ಪ್ರಸಿದ್ದ ಐತಿಹಾಸಿಕ ಚಂದ್ರಗುತ್ತಿ ಗ್ರಾಮವನ್ನು ನಿನ್ನೆ ನಡೆದ ಬಜೆಟ್ ನಲ್ಲಿ ಧಾರ್ಮಿಕ ಹಾಗೂ ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿಪಡಿಸಲು “ಚಂದ್ರಗುತ್ತಿ ಅಭಿವೃದ್ಧಿ ಪ್ರಾಧಿಕಾರ” ರಚನೆ ಮಾಡುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸರ್ಕಾರ ಇನ್ನ? ಹೆಚ್ಚಿನ ಒತ್ತು ನೀಡಿದೆ ಎಂದರು.

ಮುಂದಿನ ದಿನಗಳಲ್ಲಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.