ಶಿವಮೊಗ್ಗ: ಜಿಲ್ಲಾ ಕ್ಷತ್ರೀಯ ಮರಾಠ ಸೇವಾ ಸಂಘದ ವತಿಯಿಂದ ಮಾ. ೧೫ರಂದು ಬೆಳಗ್ಗೆ ೧೧ ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಮರಾಠ ಸಮಾಜದ ವೆಬ್ ಸೈಟ್ ಬಿಡುಗಡೆ ಹಾಗೂ ಸಮಾಜದ ಹಿರಿಯ ಮುಖಂಡರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಬೆಂಗಳೂರಿನ ಗೋಸಾಯಿ ಮಠದ ಶ್ರೀ ಮಂಜುನಾಥ ಭಾರತಿ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್

ಸಮಾರಂಭ ಉದ್ಘಾಟಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಸಚಿನ್ ಶಿವಾಜಿರಾವ್ ಶಿಂಧೆ ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ, ಸಂಸದ ಬಿ.ವೈ. ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಎಂ.ಜಿ. ಮುಳೆ ವೆಬ್ಸೈಟ್ ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಶಾಸಕರಾದ ಬಿ.ಕೆ. ಸಂಗಮೇಶ್ವರ್, ಶಾರದಾ ಪೂರ್ಯಾನಾಯ್ಕ್, ಬೇಳೂರು

ಗೋಪಾಲಕೃಷ್ಣ, ಎಸ್.ಎನ್. ಚನ್ನಬಸಪ್ಪ, ಬಿ.ವೈ. ವಿಜಯೇಂದ್ರ, ಆರಗ ಜ್ಞಾನೇಂದ್ರ, ಡಿ.ಎಸ್. ಅರುಣ್, ಡಾ. ಧನಂಜಯ ಸರ್ಜಿ, ಬಲ್ಕೀಶ್ ಬಾನು, ಎಸ್.ಎಲ್. ಬೋಜೇಗೌಡ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಸೂಡಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಸದಸ್ಯ ಎಂ. ಪ್ರವೀಣ್ ಕುಮಾರ್, ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರವೀಣ್ ಕುಮಾರ್, ರಮೇಶ್ ಟಿ.ಕೆ., ದಿಲೀಪ್, ಗೀತಾ ಸತೀಶ್, ಮೀರಾಬಾಯಿ, ಕವಿತಾ ರಾವ್, ನವೀನ್ ಆರ್.ವಿ., ಸತೀಶ್, ಇತರರು ಇದ್ದರು.