
ಶಿವಮೊಗ್ಗ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವತಿಯಿಂದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಮಾ.15 ರಿಂದ 18 ರವರೆಗೆ ಕಾಲೇಜಿನ ಆವರಣದಲ್ಲಿ 26 ನೇ ರಾಜ್ಯಮಟ್ಟದ ಅಂತರ ಮಹಾವಿದ್ಯಾಲಯಗಳ ಅಥ್ಲೆಟಿಕ್ಸ್ ಕ್ರೀಡಾಕೂಟ ‘ಸದೃಡ-2.0’ ಏರ್ಪಡಿಸಲಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಸುದ್ದಿಗೋಷ್ಟಿಯಲ್ಲಿ ವಿವರಿಸಿದರು.

ಮಾ.15 ರ ಬೆಳಗ್ಗೆ 09:00 ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ, ವಿಟಿಯು ಕುಲಪತಿ ಡಾ.ವಿದ್ಯಾಶಂಕರ್ ಉದ್ಘಾಟಿಸಲಿದ್ದಾರೆ. ಅರ್ಜುನ ಪ್ರಶಸ್ತಿ ಪುರಸ್ಕೃತ ಎಸ್.ಡಿ.ಈಶನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಅಧ್ಯಕ್ಷತೆ ವಹಿಸಲಿದ್ದು, ವಿಟಿಯು ಕುಲಸಚಿವರಾದ ಡಾ.ಬಿ.ಇ.ರಂಗಸ್ವಾಮಿ, ಮೌಲ್ಯಮಾಪನ ಕುಲಸಚಿವ ಡಾ.ಟಿ.ಎನ್.ಶ್ರೀನಿವಾಸ, ಹಣಕಾಸು ಅಧಿಕಾರಿ ಡಾ.ಪ್ರಶಾಂತ್ ನಾಯಕ್, ಎನ್ಇಎಸ್ ಉಪಾಧ್ಯಕ್ಷರಾದ ಸಿ.ಆರ್.ನಾಗರಾಜ, ಕಾರ್ಯದರ್ಶಿ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ, ಖಜಾಂಚಿ ಡಿ.ಜಿ.ರಮೇಶ್, ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್, ವಿಟಿಯು ದೈಹಿಕ ಶಿಕ್ಷಣ ನಿರ್ದೇಶಕ ಡಾ.ಪಿ.ವಿ.ಕಡಗದಕೈ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಚೇತನ್.ಎ.ವಿ ಉಪಸ್ಥಿತರಿರುವರು. ಇದೇ ವೇಳೆ ಸದೃಡ-2.0 ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಾಗುತ್ತಿದೆ.

ಮಾ.18 ರ ಮಧ್ಯಾಹ್ನ 03:00 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ವಿಟಿಯು ಮೌಲ್ಯಮಾಪನ ಕುಲಸಚಿವ ಡಾ.ಟಿ.ಎನ್.ಶ್ರೀನಿವಾಸ ಮುಖ್ಯ ಅತಿಥಿಗಳಾಗಿ ಭಾಗವಹಿಸಿಲಿದ್ದು, ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಿದ್ದಾರೆ.

ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್ ಮಾತನಾಡಿ, ರಾಜ್ಯದ ವಿವಿಧ 150 ಇಂಜಿನಿಯರಿಂಗ್ ಕಾಲೇಜುಗಳ ಸುಮಾರು 2 ಸಾವಿರ ವಿದ್ಯಾರ್ಥಿಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ನಾಲ್ಕು ದಿನಗಳ ಈ ಕ್ರೀಡಾಕೂಟದಲ್ಲಿ ಸುಮಾರು 44 ವಿವಿಧ ಅಥ್ಲೆಟಿಕ್ಸ್ ಕ್ರೀಡೆಗಳು ನಡೆಯಲಿದ್ದು, ಇಡಿಎಂ ಸಾಫ್ಟವೇರ್ ಮೂಲಕ ಆಧುನಿಕ ತಂತ್ರಜ್ಞಾನಗಳನ್ನು ಬಳಸಿ ತೀರ್ಪು ನೀಡುವ ವ್ಯವಸ್ಥೆ ಮಾಡಲಾಗಿದೆ. ಕ್ರೀಡಾಪಟುಗಳಿಗೆ ಕಾಲೇಜಿನಲ್ಲಿಯೆ ವಸತಿ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.

ಸುದ್ದಿಗೋಷ್ಟಿಯಲ್ಲಿ ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್, ಎಂಬಿಎ ವಿಭಾಗದ ಮುಖ್ಯಸ್ಥರಾದ ಡಾ.ಶ್ರೀಕಾಂತ್, ದೈಹಿಕ ಶಿಕ್ಷಣ ನಿರ್ದೇಶಕ ಚೇತನ್, ಎನ್ಇಎಸ್ ಪಿ.ಆರ್.ಓ ಸಿ.ಎಂ.ನೃಪತುಂಗ ಉಪಸ್ಥಿತರಿದ್ದರು.