
ಕರ್ನಾಟಕ ರಾಜ್ಯದಲ್ಲಿನ ಮಕ್ಕಳಿಗೆ ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ಹಂತದವರೆಗೂ ಒಂದೇ ಸೂರಿನಡಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಸದುದ್ದೇಶದಿಂದ ಕರ್ನಾಟಕ ಪಬ್ಲಿಕ್ ಶಾಲೆ (ಕೆ.ಪಿ.ಎಸ್) ಗಳನ್ನು ಈಗಾಗಲೇ ತೆರೆಯಲಾಗಿದ್ದು, ಅವುಗಳನ್ನು ಏಷಿಯನ್

ಡೆವಲಪ್ಮೆಂಟ್ ಬ್ಯಾಂಕ್ ನ ನೆರವಿನೊಂದಿಗೆ ವಿಸ್ತರಿಸುವ ಕುರಿತು ಇಂದು ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್,ಮಧು ಬಂಗಾರಪ್ಪನವರು ವಿಧಾನಸೌಧದಲ್ಲಿ ಎ.ಡಿ.ಬಿ ಅಧಿಕಾರಿಗಳೊಂದಿಗೆ ಸಭೆ ನೆಡೆಸಿದರು.

ಕರ್ನಾಟಕ ಪಬ್ಲಿಕ್ ಶಾಲೆ (ಕೆ.ಪಿ.ಎಸ್) ಗಳಿಂದಾಗಿ ಗ್ರಾಮಿಣ ಭಾಗದ ಮಕ್ಕಳ ಶೈಕ್ಷಣಿಕ ವಿಕಾಸ ಹಾಗೂ ಕಲಿಕಾ ಸಾಮರ್ಥ್ಯ ಹೆಚ್ಚಿಸುವುದರ ಜೊತೆಗೆ ಮಕ್ಕಳು ಕಲಿಕೆಯಲ್ಲಿ ಹಿಂದುಳಿಯದಂತೆ ಎಚ್ಚರ ವಹಿಸಿಸುವ ಕುರಿತಂತೆ ಸಮಗ್ರವಾಗಿ ಚರ್ಚಿಸಿ, ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು.

ಈ ವೇಳೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ರಶ್ಮಿ ಮಹೇಶ್, ಆಯುಕ್ತರಾದ ಶ್ರೀ ತ್ರಿಲೋಕ ಚಂದ್ರ, ರಾಜ್ಯ ಯೋಜನಾ ನಿರ್ದೇಶಕರಾದ ಶ್ರೀ ಎಂ. ಕುರ್ಮರಾವ್, ಧಾರವಾಡ ವಿಭಾಗದ ಅಪರ ಆಯುಕ್ತರಾದ ಜಯಶ್ರೀ ಶಿಂತ್ರಿ ಹಾಗೂ ಕಲ್ಬುರ್ಗಿ ವಿಭಾಗದ ಅಪರ ಆಯುಕ್ತರಾದ ಡಾ.ಆಕಾಶ್ ಸೇರಿದಂತೆ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.