ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಯುವಕರಿಬ್ಬರು ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಶಂಕೆ ವ್ಯಕ್ತವಾಗಿದ್ದು, ಎನ್ಐಎ ಅಧಿಕಾರಿಗಳು ಭೇಟಿ ನೀಡಿದ್ದಾರೆ ಸುದ್ದಿ ಮೂಲಗಳು ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸಿವೆ.
ಸ್ಯಾಟಲೈಟ್ ಫೋನ್ ಬಳಕೆಯ ಹಿನ್ನೆಲೆಯಲ್ಲಿ ಕಳೆದ ವರ್ಷ ಮಾರ್ಚ್ನಲ್ಲಿ ತೀರ್ಥಹಳ್ಳಿ ತಾಲೂಕಿನಾದ್ಯಂತ ಎನ್ಐಎ ಕೂಬಿಂಗ್ ನಡೆಸಿತ್ತು. ಈ ವೇಳೆ ತೀರ್ಥಹಳ್ಳಿಯ ಯುವಕರಿಬ್ಬರು ಉಗ್ರರೊಂದಿಗೆ ಸಂಪರ್ಕ ಹೊಂದಿರುವುದು ದೃಢಪಟ್ಟಿತ್ತು. ಅಷ್ಟರಲ್ಲಿ ಯುವಕರು ನಾಪತ್ತೆಯಾಗಿದ್ದರು.
ಕಳೆದ ವರ್ಷ ಮಾ.19 ರಂದು ಎನ್ಐಎ ಅಧಿಕಾರಿಗಳು ತೀರ್ಥಹಳ್ಳಿಯ ಯುವಕರ ಮನೆಗೆ ಬಂದು ವಿಚಾರಣೆ ನಡೆಸಿದ್ದರು. ಇದೀಗ ಹೆಚ್ಚಿನ ತನಿಖೆಗಾಗಿ ಮತ್ತೆ ಯುವಕರ ಮನೆಗೆ ಭೇಟಿ ನೀಡಿರುವ ಎನ್ಐಎ ಅಧಿಕಾರಿಗಳ ತಂಡ, ತಲೆಮರೆಸಿಕೊಂಡಿರುವ ಯುವಕರು ಕುಟುಂಬದೊಂದಿಗೆ ಸಂಪರ್ಕ ಸಾಧಿಸಿದ್ದಾರೆಯೇ ಎಂದು ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.