ನವದೆಹಲಿ: ಕೇಂದ್ರದ ನೂತನ ಕೃಷಿ ಕಾಯ್ದೆಗಳನ್ನ ವಿರೋಧಿಸಿ ನಡೆಸುತ್ತಿರುವ ಹೋರಾಟ 4 ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಮಾರ್ಚ್ 26ರಂದು ಭಾರತ್ ಬಂದ್ʼಗೆ ರೈತ ಸಂಘಟನೆಗಳು ಕರೆ ನೀಡಿವೆ.
ಇನ್ನು ಇದರ ಜತೆಗೆ ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಮಾರ್ಚ್ 15ರಂದು ಖಾಸಗೀಕರಣ ಹಾಗೂ ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಸಂಘದ ಸಂಘಟನೆ ಸಂಯಕ್ತ ಕಿಸಾನ್ ಮೋರ್ಚಾ ತಿಳಿಸಿದೆ.
ಕಳೆದ ವಾರ ರೈತ ಮುಖಂಡ ರಾಕೇಶ್ ಟಿಕೈತ್ ಅವರು, ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯುವವರೆಗೆ ತಮ್ಮ ಹೋರಾಟ ಮುಂದುವರಿಯಲಿದೆ ಎಂದು ಹೇಳಿದ್ದರು.
ಕೇಂದ್ರ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿ ಗಡಿಗಳಲ್ಲಿ ರೈತರ 100 ದಿನಗಳ ಪ್ರತಿಭಟನೆ ಗಳನ್ನು ಪೂರೈಸಿದ ಪ್ರಯುಕ್ತ ಅವರು ರಾಮರಾಜನ್ ನಗರದಲ್ಲಿ ಮಾತನಾಡುತ್ತಿದ್ದರು.