
ಶಿವಮೊಗ್ಗ.ಮಾ.17ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ನ್ಯಾಯಾಂಗ ಘಟಕ, ಜಿಲ್ಲಾಡಳಿತ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಮಾ.19 ರ ಸಂಜೆೆ 05.30 ರಿಂದ 6.30 ಗಂಟೆಯವರೆಗೆ ಕುವೆಂಪು ರಂಗಮAದಿರದಲ್ಲಿ ಶಿಕ್ಷಣ ಇಲಾಖೆ, ರೇಷ್ಮೆ ಇಲಾಖೆ, ಕೃಷಿ ಮತ್ತು ತೋಟಗಾರಿಕೆ ಇಲಾಖೆ, ನ್ಯಾಯಾಂಗ ನೌಕರರು, ಜಿಲ್ಲಾ ಮತ್ತು ತಾಲ್ಲೂಕು ಹಾಗೂ ಇತರೆ ಇಲಾಖೆ ಅಧಿಕಾರಿಗಳೊಂದಿಗೆ ‘ಲೋಕಾಯುಕ್ತ ಕಾಯ್ದೆಯ ಕಾನೂನು ಅರಿವು ಕಾರ್ಯಕ್ರಮವನ್ನು’ ಏರ್ಪಡಿಸಲಾಗಿದೆ.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮಾನ್ಯ ನ್ಯಾಯಮೂರ್ತಿಗಳು ಹಾಗೂ ಉಪ ಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ರವರು ನೆರವೇರಿಸುವರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾದ ಅಧ್ಯಕ್ಷರಾದ ಮಂಜುನಾಥ್ ನಾಯಕ್ ಅಧ್ಯಕ್ಷತೆ ವಹಿಸುವರು. ಮುಖ್ಯಅತಿಥಿಗಳಾಗಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ, ಜಿ.ಪಂ. ಸಿಇಓ ಎನ್. ಹೇಮಂತ್, ಜಿಲ್ಲಾ

ಪೊಲೀಸ್ ಅಧೀಕ್ಷಕರಾದ ಜಿ.ಕೆ. ಮಿಥುನ್ ಕುಮಾರ್ ಆಗಮಿಸಲಿದ್ದು, ಜಿಲ್ಲಾ ನ್ಯಾಯಾಧೀಶರು ಮತ್ತು ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರು ಹಾಗೂ ವಿಚಾರಣೆಗಳು-14 ರ ಎನ್.ಆರ್. ಲೋಕಪ್ಪ, ಜಿಲ್ಲಾ ನ್ಯಾಯಾಧೀಶರು ಮತ್ತು ಕರ್ನಾಟಕ ಲೋಕಾಯುಕ್ತದ ಅಪರ

ನಿಬಂಧಕರು ಹಾಗೂ ವಿಚಾರಣೆಗಳು-05ರ ಜಿ.ವಿ. ವಿಜಯನಂದ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದÀ ಸದಸ್ಯ ಕಾರ್ಯದರ್ಶಿಯಾದ ಎಂ.ಎಸ್ ಸಂತೋಷ್, ಸಿವಿಲ್ ನ್ಯಾಯಾಧೀಶರು ಮತ್ತು ಉಪ ಲೋಕಾಯುಕ್ತರ ಆಪ್ತ ಕಾರ್ಯದರ್ಶಿಯಾದÀ ಕಿರಣ್ ಪಿ.ಎಂ. ಪಾಟೀಲ್ ಪಾಲ್ಗೊಳ್ಳುವರು.