
ಶಿವಮೊಗ್ಗ,ಮಾ.21: ಕರ್ನಾಟಕ ರಾಜ್ಯ ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘ, ಬೆಂಗಳೂರು, ಶಿವಮೊಗ್ಗ ಜಿಲ್ಲಾ ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘ, ಶಿವಮೊಗ್ಗ ಜಿಲ್ಲಾ ಗಂಗಾಮತ ಸಂಘ, ಶಿವಮೊಗ್ಗ ಜಿಲ್ಲಾ ಮೊಗವೀರ ಮಹಾಜನ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಮಾರ್ಚ್ 23 ರ ಬೆಳಿಗ್ಗೆ 10 ಗಂಟೆಗೆ ಶಿವಮೊಗ್ಗ ನಗರದ ಮಾಧವ ಮಂಗಲ ಸಭಾ ಭವನದಲ್ಲಿ ರಾಜ್ಯಮಟ್ಟದ ವಧು-ವರರ ಸಮಾವೇಶ

ಹಮ್ಮಿಕೊಳ್ಳಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಗಂಗಾಮತ ಸಂಘದ ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಎಂ.ಹೆಚ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಿಕ್ಷಣ ಸಚಿವ ಮಧುಬಂಗಾರಪ್ಪ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನ

ಶಿವಮೊಗ್ಗ ಜಿಲ್ಲಾ ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘ ಅಧ್ಯಕ್ಷರಾದ ಹೆಚ್.ಎಸ್.ಚಂದ್ರಶೇಖರ್ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಚನ್ನಬಸಪ್ಪ, ಶಾರದಾ ಪೂರ್ಯಾನಾಯ್ಕ್, ಕರ್ನಾಟಕ ರಾಜ್ಯ ಗಂಗಾಮತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಎ.ಹಾಲೇಶಪ್ಪ, ಪತ್ರಕರ್ತರಾದ ಶ್ರೀನಿವಾಸ್ ಮೂರ್ತಿ ಎ.ಎಲ್,

ಆನಂದಪ್ಪ ಬಿ, ದಿನೇಶ್, ಆರ್.ಜರ್ನಾಧನ್, ಕುಬೇರಪ್ಪ, ಹನುಮೇಶ್ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.
ರಾಜ್ಯಾದ್ಯಂತ ನೆಲೆಸಿರುವ ಗಂಗಾಮತ, ಬೆಸ್ತ, ಮೊಗವೀರ, ಸುಣಗಾರ, ಕೋಲಿ, ಕಬ್ಬಲಿಗ, ಜಾಲಗಾರ, ಬಾರ್ಕಿ ಇತರೆ ಪರ್ಯಾಯ ಹೆಸರುಗಳಿಂದ ಕರೆಯಲ್ಪಡುವ ಉಪಜಾತಿಗಳ ಅನುಕೂಲಕ್ಕಾಗಿ ರಾಜ್ಯಮಟ್ಟದ ವಧು-ವರರ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಸಮಾವೇಶದಲ್ಲಿ ಸಮಾಜ ಬಾಂಧವರು ತಮ್ಮ ಮಕ್ಕಳಿಗೆ ಸೂಕ್ತ ವಧು-ವರರನ್ನು ಆಯ್ಕೆ ಮಾಡಿಕೊಳ್ಳುವ ಈ ಸದಾವಕಾಶದ ಉಪಯೋಗ ಪಡೆದುಕೊಳ್ಳಬೇಕೆಂದು ಸಂಘಧ ಪ್ರಧಾನ ಕಾರ್ಯದರ್ಶಿ ಕೋರಿದ್ದಾರೆ.