
ಭದ್ರಾವತಿ: ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರ ಇಂದು ತೆರೆ ಕಂಡಿದ್ದು,, ಚಿತ್ರದಲ್ಲಿ ಸ್ಥಳೀಯ ಪ್ರತಿಭೆ ಆಶಾ ಭಟ್ ನಾಯಕಿಯಾಗಿದ್ದಾರೆ.
2019ರಲ್ಲಿ ಬಾಲಿವುಡ್ ಚಿತ್ರ ‘ಜಂಗ್ಲಿ’ಯಲ್ಲಿ ದ್ವಿತೀಯ ನಾಯಕಿಯಾಗಿ ಅಭಿನಯಿಸುವ ಮೂಲಕ ಹೆಸರು ಮಾಡಿದ್ದ ಆಶಾ, ಮೊದಲ ಬಾರಿಗೆ ಕನ್ನಡ ಚಿತ್ರದ ನಾಯಕಿ ನಟಿಯಾಗಿ ತೆರೆ ಮೇಲೆ ಕಾಣಿಸುತ್ತಿದ್ದಾರೆ.
ಭದ್ರಾವತಿಯಲ್ಲಿ ಸೇಂಟ್ ಚಾರ್ಲ್ಸ್ ಕಾನ್ವೆಂಟ್ನಲ್ಲಿ ವಿದ್ಯಾಭ್ಯಾಸ ಆರಂಭಿಸಿ ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ಕಲಿಯುತ್ತಿರುವಾಗಲೇ ಪಠ್ಯೇತರ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ಆಶಾ, ದೆಹಲಿ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಪ್ರತಿನಿಧಿಸಿದ ಹೆಗ್ಗಳಿಕೆ ಪಡೆದಿದ್ದರು.
ಆಶಾ, 2014ರಲ್ಲಿ ‘ಮಿಸ್ ಸುಫ್ರಾ’ ಇಂಟರ್ನ್ಯಾಷನಲ್ ಸುಂದರಿಯಾಗಿ ಆಯ್ಕೆಯಾಗುವ ಮೂಲಕ ಜಾಹೀರಾತು ಕ್ಷೇತ್ರದಲ್ಲಿ ತಮ್ಮ ಹೆಜ್ಜೆಯನ್ನು ಬೆಳೆಸಿದರು.