
ಶಿವಮೊಗ್ಗ : ಮಾರ್ಚ್ ೨೬ : : ಏಪ್ರಿಲ್೦೫ರಂದು ಬೆಳಿಗ್ಗೆ ೧೧ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಹಾಗೂ ಏಪ್ರಿಲ್೧೪ರಂದು ನಗರದ ಡಾ|| ಬಿ.ಆರ್.ಅಂಬೇಡ್ಕರ್ಭವನದಲ್ಲಿ ಡಾ|| ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಸ್ಥಳೀಯ ಸಂಘಟನೆಗಳ ಸಹಯೋಗದೊಂದಿಗೆ ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು.

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಬಾಬು ಜಗಜೀವನರಾಮ್ಮತ್ತು ಬಿ.ಆರ್.ಅಂಬೇಡ್ಕರ್ರವರ ಜಯಂತಿ ಆಚರಣೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ಈ ಜಯಂತಿಗಳೆರಡೂ ನಡೆಯುವ ದಿನಾಂಕಗಳಂದು ನಗರದ ಸೈನ್ಸ್ಮೈದಾನದಿಂದ ಕಲಾತಂಡಗಳೊಂದಿಗೆ ಮಹನೀಯರ ಭಾವಚಿತ್ರದ ಮೆರವಣಿಗೆಯು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಕಾರ್ಯಕ್ರಮಗಳು ನಡೆಯುವ ನಿಗಧಿತ ಸ್ಥಳದಲ್ಲಿ ಸಂಪನ್ನಗೊಳ್ಳುವುದು. ಅಂದು ನಗರದ ಪ್ರಮುಖ ವರ್ತುಲಗಳು, ಕಚೇರಿ ಕಟ್ಟಡಗಳನ್ನು ವಿದ್ಯುತ್ದೀಪಗಳಿಂದ ಅಲಂಕರಿಸುವಂತೆ ಸೂಚಿಸಲಾಗುವುದು ಎಂದರು.
ಅಂದು ನಡೆಯುವ ಸಭಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ವಿಧಾನಸಭೆ ಮತ್ತು ವಿಧಾನ ಪರಿಷತ್ಶಾಸಕರು ಹಾಗೂ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳು ಹಾಗೂ ಗಣ್ಯರನ್ನು ಆಹ್ವಾನಿಸಲಾಗುವುದು. ಇದೇ ವೇದಿಕೆಗಳಲ್ಲಿ ವಿಷಯ ತಜ್ಞರಿಂದ ಜಗಜೀವನರಾಮ್ರವರ ಮತ್ತು ಬಾಬಾ ಸಾಹೇಬ್ಅಂಬೇಡ್ಕರ್ರವರ ಜೀವನಾದರ್ಶಗಳ ಕುರಿತು ವಿಶೇಷ ಉಪನ್ಯಾಸ ಏರ್ಪಡಿಸಲಾಗುವುದು ಎಂದರು.
ಈ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸುವ ಭಾಗವಾಗಿ ಜಿಲ್ಲೆಯ ಪರಿಶಿಷ್ಟ ಜಾತಿ, ಪಂಗಡಗಳ ಸ್ಥಳೀಯ ಪ್ರತಿಭಾವಂತ ವಿದ್ಯಾರ್ಥಿಗಳು, ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸೇವೆ ಸಲ್ಲಿಸಿದ ಸಾಧಕರನ್ನು ಗುರುತಿಸಿ ಗೌರವಿಸಲು ಉದ್ದೇಶಿಸಲಾಗಿದೆ. ಕಾರ್ಯಕ್ರಮ ನಡೆಯುವ ದಿನಗಳಂದು ಸರ್ಕಾರದ ಎಲ್ಲಾ ಇಲಾಖೆಗಳ ಅಧಿಕಾರಿ-ಸಿಬ್ಬಂಧಿಗಳು, ಸ್ಥಳೀಯ ಸಂಘ-ಸಂಸ್ಥೆಗಳ ಸದಸ್ಯರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಅವರು ಸೂಚಿಸಿದ್ದಾರೆ.

ಸಭೆಯಲ್ಲಿ ಉಪಸ್ಥಿತರಿದ್ದ ಸಂಘಟನೆಗಳ ಮುಖಂಡರು ಇಬ್ಬರು ಮಹನೀಯರ ಜಯಂತಿಗಳನ್ನು ಅದ್ಧೂರಿಯಾಗಿ ಆಚರಿಸಲು ಹಲವು ಸಲಹೆಗಳನ್ನು ನೀಡಿದರು. ಅನೇಕ ವರ್ಷಗಳಿಂದ ನಿರ್ಮಾಣ ಹಂತದಲ್ಲಿರುವ ಬಾಬು ಜಗಜೀವನರಾಮ್ಅವರ ಸಭಾಭವನದ ಬಾಕಿ

ಕಾಮಗಾರಿಯನ್ನು ಮುಂದಿನ ಮೂರು ತಿಂಗಳ ಅವಧಿಯೊಳಗೆ ಪೂರ್ಣಗೊಳಿಸಿ, ಸಾರ್ವಜನಿಕ ಸೇವೆಗೆ ಮುಕ್ತಗೊಳಿಸುವಂತೆ ಒತ್ತಾಯಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್, ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್ಕುಮಾರ್ಭೂಮರೆಡ್ಡಿ, ಸೂಡಾ ಆಯುಕ್ತ ವಿಶ್ವನಾಥ ಮುದ್ದಜ್ಜಿ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಮಲ್ಲೇಶಪ್ಪ, ರಾಜಕುಮಾರ್, ರಂಗಪ್ಪ, ತಿಮ್ಮಯ್ಯ, ಐಹೊಳೆ ನಾರಾಯಣ್, ಶಿವಣ್ಣ, ಬಸವರಾಜ್, ಮೂರ್ತಿ, ಪ್ರಭು, ಏಳುಕೋಟಿ ಸೇರಿದಂತೆ ಸ್ಥಳೀಯ ದಲಿತ ಸಂಘಟನೆಗಳ ಮುಖಂಡರು, ಸಾಮಾಜಿಕ ಕಾರ್ಯಕರ್ತರು ಭಾಗವಹಿಸಿದ್ದರು.