ಭದ್ರಾವತಿ: ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುವ ಇಂಟರ್ಸಿಟಿ ರೈಲಿಗೆ ಯುವಕನೋರ್ವ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಬೆಂಗಳೂರಿನಿಂದ ಆಗಮಿಸಿದ ರೈಲು ಪ್ರಯಾಣಿಕರನ್ನು ಇಳಿಸಿ ಮುಂದೆ ಸಾಗುವ ವೇಳೆಗೆ ಸುಮಾರು 25 ವರ್ಷದ ಯುವಕ ಕೊನೆಯ ಬೋಗಿಯ ಗಾಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಮೃತ ಯುವಕನ ದೇಹದ ಗುರುತು ಪತ್ತೆಹಚ್ಚಿಲ್ಲ. ಸ್ಥಳೀಯ ಹಾಗೂ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ರಾತ್ರಿಯೇ ಮೆಗ್ಗಾನ್ ಮೃತ ದೇಹ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲಾಗಿದೆ.
ಮೃತ ಯುವಕನ ಆತ್ಮಹತ್ಯೆಗೆ ಕಾರಣ ಇನ್ನು ತಿಳಿದು ಬಂದಿಲ್ಲ.