
ಶಿವಮೊಗ್ಗ : ನಗರದ ರಾಷ್ಟ್ರೀಯ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಹೆಚ್.ಎನ್.ದೇವರಾಜ್ ಅವರು ನೆಹರು ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಗುಂಡು ಎಸೆತ (ಪ್ರಥಮ), ಉದ್ದ ಜಿಗಿತ (ಪ್ರಥಮ) ಬಹುಮಾನ ಪಡೆದಿದ್ದಾರೆ. ಜೊತೆಯಲ್ಲಿ ಇವರ ನಾಯಕತ್ವದ ತಂಡವು ವಾಲಿಬಾಲ್ ಮತ್ತು ಬಾಸ್ಕೆಟ್ಬಾಲ್ ನಲ್ಲಿ ಪ್ರಥಮ ಬಹುಮಾನ ಪಡೆದಿದ್ದು,

ಬೆಸ್ಟ್ ಪಾಸರ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಏಪ್ರಿಲ್ ತಿಂಗಳು ಮಂಗಳೂರಿನಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ ನಡೆಯಲಿದೆ.

ದೇವರಾಜ್ ಅವರಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಆಡಳಿತ ಮಂಡಳಿಯ ಸದಸ್ಯರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.