
ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ತರ ಬಳಿ ಸರ್ವೆಯರ್ಸಿ ಗಳು ಬಂದಾಗ ಸ್ಹಿಥಳೀಯರು ಸಂಯಮ, ಸಮಾಧಾನದಿಂದ ವರ್ತಿಸಿ ಸಂಪೂರ್ಣ ಮಾಹಿತಿ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಮನವಿ ಮಾಡಿದರು.

ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು

ಸಂತ್ರಸ್ತರ ಪರವಾಗೇ ಇದ್ದಾರೆ. ಜಿಲ್ಲೆಯಲ್ಲಿ ಸುಮಾರು ೯ಸಾವಿರ ಕುಟುಂಬಗಳು ಮುಳುಗಡೆ ಸಂತ್ರಸ್ತರಾಗಿದ್ದಾರೆ. ಸರ್ವೆಗೆ ಬರುವ ಅಧಿಕಾರಿಗಳೊಂದಿಗೆ ಸಹಕರಿಸಿ ಸರಿಯಾಗಿ ಸರ್ವೆ ಮಾಡಿಕೊಳ್ಳಿ ಎಂದು ಕೇಳಿಕೊಂಡರು.

ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿಯ ಎದುರಿನ ಮೈದಾನದ ಕುರಿತು ಕೇಳಿದ ಪ್ರಶ್ನೆಗೆ ಆ ಕುರಿತು ನಾನು ಏನೂ ಮಾತಾಡುವುದಿಲ್ಲ.

ಈ ಕಾನೂನಿನ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಎಸ್ಪಿ ಅವರು ನೋಡಿಕೊಳ್ಳಲಿದ್ದಾರೆ ಎಂದು ಹೇಳಿ ಕೈತೊಳೆದುಕೊಂಡರು.