
ಶಿವಮೊಗ್ಗ, ಏ.09:
ಶಿವಮೊಗ್ಗ ಜಿಲ್ಲೆಯ ತ್ಯಾವರೆಚಟ್ನಳ್ಳಿ ಗ್ರಾಮದಲ್ಲಿ ಅಕ್ರಮ ಮರಳು ದಂಧೆಕೋರರು ಸಂಗ್ರಹಿಸಿದ್ದ ಸುಮಾರು 25 ಲಾರಿ ಲೋಡ್ ಅಕ್ರಮ ಮರಳು ಅಡ್ಡೆ ಮೇಲೆ ಉಪವಿಭಾಧಿಕಾರಿ ಸತ್ಯನಾರಾಯಣ ನೇತೃತ್ವದಲ್ಲಿ ಕಂದಾಯ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿ ಅಕ್ರಮ ಮರಳು ಜಪ್ತಿ ಮಾಡಿ ವಶಕ್ಕೆ ಪಡೆದಿದ್ದಾರೆ.

ಇಲ್ಲಿ ತುಂಗಾನದಿಯಿಂದ ಅಕ್ರಮವಾಗಿ ಮರಳು ತೆಗೆದು ಸಂಗ್ರಹ ಮಾಡಿ ದುಬಾರಿ ಬೆಲೆಗೆ ಮಾರಾಟ ಮಾಡುವವರಿಗೆ ಶಾಕ್ ನೀಡಿ ಬಿಸಿ ಮುಟ್ಟಿಸಿದ್ದಾರೆ. ಈ ಹಲವು ವಾಹನಗಳನ್ನು ವಶಪಡಿಸಿಕೊಂಡಿದ್ದು, ದೂರು ದಾಖಲಿಸಿಕೊಳ್ಳಲಾಗಿದೆ.

ಈ ಅಕ್ರಮ ಮರಳು ಗಣಿಗಾರಿಕೆ ಸಂಬಂಧ ಪೊಲೀಸರ ತಂಡ ರಚನೆ ಮಾಡಿ. ಅಕ್ರಮ ಮರಳು ಗಣಿಗಾರಿಕೆ ನಡೆಯದಂತೆ ತೀವ್ರ ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಪ್ರಿಯಾ, ರೆವಿನ್ಯೂ ಇನ್ಸ್ ಪೆಕ್ಟರ್ ಅ.ಮ. ಶಿವಮೂರ್ತಿ ಸೇರಿದಂತೆ ಇತರಿದ್ದರು.