
ಶಿವಮೊಗ್ಗ: ನಗರದ ಡಿಸಿ ಕಚೇರಿ ಮುಂಭಾಗದ ವಿವಾದಿತ ಮೈದಾನದ ಸಮಸ್ಯೆ ಸೌಹಾರ್ದಯುತವಾಗಿ ಬಗೆಹರಿದಿದೆ.

ಜಿಲ್ಲಾ ಪೊಲೀಸ್ ವತಿಯಿಂದ ನಿರ್ಮಿಸಿದ ಬ್ಯಾರಿಕೇಡ್ ಗಳನ್ನು ತೆರವುಗೊಳಿಸಿ ಹಿಂದಿನಂತೆ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.

ಪೊಲೀಸ್ ಬಿಗಿ ಬಂದೋಬಸ್ತ್ ಸಡಿಲಗೊಳಿಸಲಾಗಿದೆ.

ಮೈದಾನದ ಸುತ್ತ ಸಿಸಿ ಕ್ಯಾಮೆರಾ ಅಳವಡಿಕೆ ಮಾಡಿದ್ದು, ಪ್ರಸ್ತುತ ವಾಹನ ನಿಲುಗಡೆಗೆ ಅವಕಾಶ ನೀಡಿದ್ದಕ್ಕೆ ಸಾರ್ವಜನಿಕರು ಸಂತೋಷ ವ್ಯಕ್ತಪಡಿಸಿದ್ದಾರೆ.