ಶಿವಮೊಗ್ಗ, ಏಪ್ರಿಲ್ 16; ಶಿವಮೊಗ್ಗ ನಗರದ ಸರ್ಕಾರಿ ಬಸ್ ನಿಲ್ದಾಣದ ಸಮೀಪ ಏ.09 ರಂದು ಸುಮಾರು 45 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ಪ್ರಜ್ಞೆಯಿಲ್ಲದೆ ಬಿದ್ದಿದ್ದು, ಸಾರ್ವಜನಿಕರ ಸಹಾಯದಿಂದ ಮೆಗ್ಗಾನ್ ಆಸ್ಪತೆಗೆ ಸೇರಿಸಲಾಗಿತ್ತು. ವೈದ್ಯರು ಪರೀಕ್ಷಿಸಿ ಕಾಯಿಲೆಗೆ ಚಿಕಿತ್ಸೆ ನೀಡುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಮೃತಪಟ್ಟಿರುತ್ತಾರೆ.

ಮೃತ ವ್ಯಕ್ತಿಯ ಚಹರೆ 5.4 ಅಡಿ ಎತ್ತರ, ಕಪ್ಪು ಮೈಬಣ್ಣ, ದುಂಡನೆಯ ಮುಖ, ದೃಢವಾದ ಮೈಕಟ್ಟು ಹೊಂದಿದ್ದು, ಬಲಗೈನ ಒಳಭಾಗದಲ್ಲಿ

ಸುರೇಶ ಹಾಗೂ ಅಸ್ಪಷ್ಟವಾಗಿರುವ ಚಿತ್ರದ ಹಚ್ಚೆ ಗುರುತು ಇರುತ್ತದೆ. ಮೈಮೇಲೆ ಕೆಂಪು, ನೀಲಿ ಬಣ್ಣದ ತುಂಬು ತೋಳಿನ ಟೀಶರ್ಟ್, ಕಂದು, ಕ್ರೀಂ ಮತ್ತು ಕಪ್ಪು ಬಣ್ಣದ ಪ್ರಿಂಟೆಡ್ ನೈಟ್ ಪ್ಯಾಂಟ್ ಧರಿಸಿರುತ್ತಾನೆ.

ಈ ಮೃತ ವ್ಯಕ್ತಿಯ ವಾರಸುದಾರರು ಇದ್ದಲ್ಲಿ, ದೊಡ್ಡಪೇಟೆ ಪೊಲೀಸ್ ಠಾಣೆ ದೂ.ಸಂ.: 08182-261414/ 9916882544 ನ್ನು ಸಂಪರ್ಕಿಸುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.