ಶಿವಮೊಗ್ಗ,ಏ.೧೬: ಜಾರಿನಿರ್ದೇಶನಾಲಯ ಹಾಗೂ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಕೇಂದ್ರ ಬಿ ಜೆ ಪಿ ಸರಕಾರದ ವಿರುದ್ಧ ಇಂದು ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ ಕೇಂದ್ರ ಅಂಚೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ವೇಳೆ ಅಂಚೆ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದರು. ಈ ಸಂದರ್ಭದಲ್ಲಿ ಪೊಲೀಸರಿಗೂ ಮತ್ತು ಪ್ರತಿಭಟನಕಾರರಿಗೆ ಮಾತಿನ ಚಕಮಕಿ ಅಲ್ಲದೆ ಲಘು ಲಾಠಿ ಪ್ರಹಾರ ಕೂಡ ನಡೆಯಿತು.

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್ ಹೆರಾಲ್ಡ್ ಸಂಸ್ಥೆ ಯ ಆಸ್ತಿ ಗಳನ್ನು ಮುಟ್ಟು ಗೋಲು ಹಾಕಿ ಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ಪ್ರತಿಭಟನಕಾರರು ಖಂಡಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್. ರಮೇಶ್ ಮಾತನಾಡಿ, ಕಾಂಗ್ರೇಸ್ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಮೇಲೆ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮುಂದುವರಿಸಿದೆ ಇವರ ಒಡೆತನದಲ್ಲಿ ಇರುವ ನ್ಯಾಷನಲ್ ಹೆರಾಲ್ಡ್ ಸಂಸ್ಥೆಯನ್ನೇ ಮುಚ್ಚಿ ಹಾಕುವ ಹುನ್ನಾರ ನಡೆಸುತ್ತಿದ್ದು ಈಗಾಗಲೇ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಇಡಿ ಆರೋಪ ಪಟ್ಟಿ ಸಲ್ಲಿಸಿದೆ ಇದನ್ನು ನಾವು ಪ್ರಬಲವಾಗಿ ಖಂಡಿಸುತ್ತೇವೆ ಎಂದರು.

ಬ್ಲಾಕ್ ಕಾಂಗ್ರೆಸ್ನ ಶಿವಕುಮಾರ್ ಮಾತನಾಡಿ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ್ ಮೇಲೆ ಕಾಂಗ್ರೆಸ್ ನಾಯಕರು ಸೇರಿದಂತೆ ವಿರೋಧ ಪಕ್ಷ ದ ನಾಯಕರು ಗಳ ವಿರುದ್ಧ ಇಡಿ ಐಟಿ ಮುಂತಾದ ತನಿಖಾ ಸಂಸ್ಥೆ ಗಳನ್ನು ಮುಂದಿಟ್ಟು ಕೊಂಡು ದಾಳಿ ನೆಡೆಸಲು ಮುಂದಾಗಿದೆ ಕೇಂದ್ರ ಸರ್ಕಾರ ಈ ತನಿಖೆ ಸಂಸ್ಥೆಗಳ ಜುಟ್ಟನ್ನು ತನ್ನ ಕೈನಲ್ಲಿ ಇಟ್ಟುಕೊಂಡು ಷಡ್ಯಂತರದ ಮೂಲಕ ವಿರೋಧ ಪಕ್ಷಗಳನ್ನು ಬಗ್ಗು ಬಡಿಯಲು ಮುಂದಾಗಿದೆ.

ಕೂಡಲೇ ರಾಷ್ಟ್ರ ಪತಿಗಳು ಮದ್ಯಪ್ರವೇಶ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಕ್ರಮ ತೆಗೆದು ಕೊಳ್ಳ ಬೇಕು ಮತ್ತು ದ್ವೇಷ ರಾಜಕಾರಣ ಮಾಡುತ್ತಿರುವ ಕೇಂದ್ರ ಸರ್ಕಾರವನ್ನು ವಜಾ ಮಾಡಬೇಕು ಎಂದು ಜಿಲ್ಲಾ ಯುವ ಕಾಂಗ್ರೇಸ್ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳ ಮೂಲಕ ಸಲ್ಲಿಸಿರುವ ಮನವಿಯಲ್ಲಿ ಆಗ್ರಹಿಸಿದೆ.

ಈ ಸಂದರ್ಭದಲ್ಲಿ ಪಿಎಲ್ಡಿಬ್ಯಾಂಕ್ ಅಧ್ಯಕ್ಷ ವಿಜಯಕುಮಾರ್(ದನಿ) ಪ್ರಮುಖರಾದ ಚೇತನ್, ಮಧುಸೂದನ್, ಇಮ್ರಾನ್, ಅಕ್ಬರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರ್ಷಿತ್ ಗೌಡ, ಚರಣ್, ಪ್ರವೀಣ್, ಗಿರೀಶ್, ಸಕ್ಲೇನ್, ಅನಿಲ್ ಪಾಟೀಲ್, ಧನುಷ್, ಮಲಗಪ್ಪ ಶಿವು, ಆಕಾಶ್, ಎನ್ಎಸ್ಯುಐ ಜಿಲ್ಲಾಧ್ಯಕ್ಷ ವಿಜಯ್, ರವಿ ಕಟಿಕೆರೆ, ಚಂದ್ರ ಜಿ.ರಾವ್, ಸುಭಾನ್, ಅಭಿ, ಆದಿತ್ಯ, ವರುಣ್ ವಿ. ಪಂಡಿತ್ ಹಾಗೂ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.