ಆನಂದಪುರ,ಏ.17:ಸರ್ಕಾರಿ ಮತ್ತು ಖಾಸಗಿ ಶಾಲೆ ಎಂಬ ಭಿನ್ನಾಭಿಪ್ರಾಯವಿಲ್ಲದೆ ನಾನು ನಮ್ಮ ತಾಲೂಕಿನಲ್ಲಿ ಸಾಧನೆ ಮಾಡುವ ಪ್ರತಿಯೊಬ್ಬ ಮಕ್ಕಳಿಗೂ ಸಹ ಪೆÇ್ರೀತ್ಸಾಹವನ್ನು ನೀಡುತ್ತೇನೆ ಎಂದು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಮತ್ತು ಶಾಸಕರಾದ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಇವರು ಆನಂದಪುರ ಬಸ್ ನಿಲ್ದಾಣದಲ್ಲಿ ಪ್ರಾರ್ಥನ ರಾಮಕೃಷ್ಣ ಶಾಲೆ ಹಮ್ಮಿಕೊಂಡಿದ್ದ ರಾಜ್ಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ ಕ್ರೀಡಾ ವಿದ್ಯಾರ್ಥಿಗಳ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು ಛತ್ತೀಸ್ಗಡ್ ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಥ್ರೋ ಬಾಲ್ ಪಂದ್ಯಾಟದಲ್ಲಿ ಉತ್ತಮ ಸಾಧನೆ ಮಾಡಿ ಚಿನ್ನದ ಪದಕಗಳನ್ನು ಗಳಿಸಿದ್ದಾರೆ ಇದು ನಮ್ಮ ತಾಲೂಕು ಹೆಮ್ಮೆಪಡುವ ಸಂಗತಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಪ್ರಾರ್ಥನಾ ರಾಮಕೃಷ್ಣ ಶಾಲೆಯ ಸಂಸ್ಥಾಪಕರಾದ ದೇವರಾಜ್ ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ. ಈ ವರ್ಷದ ಶೈಕ್ಷಣಿಕ ಪ್ರವೇಶ ಆರಂಭವಾಗಿದ್ದು ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ವಿನಂತಿಸಿಕೊಂಡರು.

ಈ ಸಂದರ್ಭದಲ್ಲಿ ಗ್ರಾ.ಪಂ ಮಾಜಿ ಅಧ್ಯಕ್ಷರಾದ ಮೋಹನ್, ಸದಸ್ಯರಾದ ಸಿರಿಜಾನ್,ಗಜೇಂದ್ರ, ಉದ್ಯಮಿಗಳಾದ ಅಶ್ವಿನಿ ,ಮುಖಂಡರಾದ ಉಮೇಶ್ ಹಾಗೂ ಹಿರಿಯ ಪತ್ರಕರ್ತರಾದ ಜಗನ್ನಾಥ್, ಬಿ.ಡಿ ರವಿಕುಮಾರ್, ಜನಪದ ಕಲಾವಿದರಾದ ಟಾಕಪ್ಪ ಮತ್ತು ಪೆÇಲೀಸ್ ಸಬ್ ಇನ್ಸ್ಪೆಕ್ಟರ್ ಯುವರಾಜ್ ಕಂಬಳಿ ಮತ್ತು ಇತರರು ಉಪಸ್ಥಿತರಿದ್ದರು.