ಶಿವಮೊಗ್ಗ: ಯುವ ಕಾಂಗ್ರೆಸ್ ಕಾರ್ಯಕರ್ತರು ಕಾನೂನು ಹೋರಾಟ ಮಾಡುವುದು ಬಿಟ್ಟು ನ್ಯಾಯಾಲಯದ ಆದೇಶಕ್ಕೆ ಸೆಡ್ಡುಹೊಡೆಯುವ ರೀತಿಯಲ್ಲಿ ನಿನ್ನೆ ಸಂಸದ ಬಿ.ವೈ.ಆರ್.ಮನೆಗೆ ಮತ್ತು ಅಂಚೆ ಕಚೇರಿಗೆ ನುಗ್ಗಲು ಯತ್ನಿಸಿರುವುದು ಸರಿಯಲ್ಲ. ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದು ತಿಳಿಸಿ ಶಿವಪ್ಪನಾಯಕ ವೃತ್ತದಲ್ಲಿ ಯುವ ಮೋರ್ಚಾ ಬಿಜೆಪಿ ವತಿಯಿಂದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ಗಾಂಧಿಯವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಯುವ ಬಿಜೆಪಿ ಅಧ್ಯಕ್ಷ ಪ್ರಶಾಂತ್ಕುಕ್ಕೆ, ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಹಗರಣ, ಕಾಂಗ್ರೆಸ್ ದೇಶಕ್ಕೆ ಮಾಡಿದ ದ್ರೋಹ, ಸ್ವಾತಂತ್ರ್ಯದ ಹೋರಾಟದ ಸಂದರ್ಭದಲ್ಲಿ ದೇಶದ ಜನತೆ ಕಾಂಗ್ರೆಸ್ನ್ನು ನಂಬಿ ಮತ್ತು ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ವಿಶ್ವಾಸದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಹೂಡಿಕೆ ಮಾಡಿದರು. ಆದರೆ ಆ ಹಣವನ್ನು ಕಾಂಗ್ರೆಸ್ ತನ್ನದೇ ಕುಟುಂಬದ ಚಾರಿಟಬಲ್ ಟ್ರಸ್ಟ್ಗೆ ವರ್ಗಾಯಿಸಿ ದೇಶಕ್ಕೆ ವಿಶ್ವಾಸ ದ್ರೋಹ ಮಾಡಿದೆ. ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಬಾರದು ಎನ್ನುವುದು ಸಂವಿಧಾನ ವಿರೋಧಿ ಧೋರಣೆಯಾಗಿದೆ. ಭ್ರಷ್ಟಚಾರದ ಮೂಲವೇ ಕಾಂಗ್ರೆಸ್ ಆಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಅಧಿನಾಯಕಿ ಮತ್ತು ರಾಹುಲಾಗಾಂಧಿ ವಿರುದ್ಧ ಮೊದಲು ಪ್ರತಿಭಟನೆ ಮಾಡಲಿ. ಬಿಜೆಪಿ ಸಂಸದರ ಮನೆಗೆ ಮುತ್ತಿಗೆಯಾಕುವ ಯಾವುದೇ ನೈತಿಕತೆ ಕಾಂಗ್ರೆಸ್ಸಿಗರಿಗಿಲ್ಲ ಎಂದರು.
ಶಾಸಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ಇಡೀ ದೇಶವನ್ನು ನುಂಗಿ ನೀರು ಕುಡಿಯಲು ನೆಲದಿಂದ ಆಕಾಶದವರೆಗೆ ಅನೇಕ

ಭ್ರಷ್ಟಚಾರಗಳನ್ನು ಮಾಡಿ ದೇಶ ಲೂಟಿ ಮಾಡಿದವರು. ಒಂದು ವರ್ಗದ ಓಲೈಕೆಗಾಗಿ ದೇಶವನ್ನೇ ಭ್ರಷ್ಟಚಾರದ ಕೂಪವಾಗಿಸಿದವರು. ಈಗ ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಸ್ವಾತಂತ್ರ್ಯ ಸಂದರ್ಭದಲ್ಲಿ ದೇಶದ ಜನತೆ ನೀಡಿದ ಹಣವನ್ನು ಭ್ರಷ್ಟಚಾರದಿಂದ ನುಂಗಿದ್ದಾರೆ. ಮೊದಲು ಅವರು ಜನತೆಯ ಕ್ಷಮೆ ಕೇಳಬೇಕು ಎಂದರು.


ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಹರಿಕೃಷ್ಣ ಮಾತನಾಡಿ, ಕರ್ನಾಟಕ ಕಾಂಗ್ರೆಸ್ಸಿಗರು ಕೇಂದ್ರ ಕಾಂಗ್ರೆಸ್ ನಾಯಕರ ಗುಲಾಮರಾಗಿದ್ದಾರೆ. ಒಂದು ಕುಟುಂಬದ ಚಾಕರಿಗೆ ನಿಂತಿದ್ದಾರೆ. ಸತ್ಯವನ್ನು ತಿಳಿಯುವ ಗೋಜಿಗೂ ಕಾಂಗ್ರೆಸ್ ಕಾರ್ಯಕರ್ತರು ಹೋಗುವುದಿಲ್ಲ. ಪೋಟೋ ಹೋರಾಟ ಮಾಡಿದ ತಕ್ಷಣ ಬಿಜೆಪಿ ಕಾರ್ಯಕರ್ತರು ಬೆದರುವುದಿಲ್ಲ ಎಂದರು.

ಎಜೆಸಿ ಕಂಪನಿ ಹುಟ್ಟಾಕಿ ಒಂದು ಹಿಂದೂ ಪತ್ರಿಕೆ, ಒಂದು ಉರ್ದು ಪತ್ರಿಕೆ ಮತ್ತು ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮಾಡುವುದಾಗಿ ಸಾವಿರಾರು ಕೋಟಿ ಹಣವನ್ನು ದೇಶದ ನಾಗರೀಕರಿಂದ ಸಂಗ್ರಹಿಸಿ ಅದನ್ನು ಎಂಗ್ ಇಂಡಿಯಾ ಎಂಬ ಚಾರಿಟೆಬಲ್ ಟ್ರಸ್ಟ್ ಸ್ಥಾಪಿಸಿ ಅಕ್ರಮವಾಗಿ ಹಣ ವರ್ಗಾವಣೆಯನ್ನು ಆ ಟ್ರಸ್ಟಿಗೆ ಮಾಡಿಕೊಂಡಿದ್ದಾರೆ. ಅದರಲ್ಲಿ ಶೇ.೩೭ರಷ್ಟು ಸೋನಿಯಾ ಗಾಂಧಿ ಹಾಗೂ ಶೇ.೩೭ ರಾಜೀವ್ಗಾಂಧಿ ಪಾಲುದಾರರಾಗಿದ್ದು, ಕರ್ನಾಟಕದ ಮಲ್ಲಿಕಾರ್ಜುನ್ ಖರ್ಗೆ ಹಾಗೂ ಇತರ ನಾಯಕರು ಇದರಲ್ಲಿ ಪಾಲುದಾರರಾಗಿದ್ದಾರೆ. ಇದು ದೇಶದ ಸ್ವಾತಂತ್ರ್ಯ ಹೋರಾಟಗಾರರಿಗೆ ಕಾಂಗ್ರೆಸ್ ಮಾಡಿದ ಅವಮಾನ ಎಂದರು.
ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಭ್ರಷ್ಟಚಾರ ಸಂಬಂಧಿಸಿದಂತೆ ನ್ಯಾಯಾಲಯಾದಲ್ಲಿ ದೂರು ದಾಖಲಾಸಿದ್ದು ಬಿಜೆಪಿ ಪಕ್ಷವಲ್ಲ, ಡಾ.ಸುಬ್ರಹ್ಮಣ್ಯ ಸ್ವಾಮಿ ಎಂಬ ನಾಯಕರು. ಇದನ್ನು ಮೊದಲು ಕಾಂಗ್ರೆಸ್ ಅರಿತುಕೊಳ್ಳಬೇಕು. ಆಮೇಲೆ ಬಿಜೆಪಿಯ ವಿರುದ್ಧ ಪ್ರತಿಭಟನೆ ಮಾಡಲಿ ಎಂದರು.
ಪತ್ರಿಭಟನೆಯಲ್ಲಿ ಪ್ರಮುಖರಾದ ಯುವ ಮೋರ್ಚಾ ಪದಾಧಿಕಾರಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.