ಶಿವಮೊಗ್ಗ:- ಉತ್ತರ ಭಾರತದ ಕಾಶ್ಮೀರ ಪ್ರದೇಶದ ಪಹಲ್ಗಾಮ್ ಗ್ರಾಮದಲ್ಲಿರುವ ಬೈಸರನ್ ಪ್ರದೇಶದಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿ ದೇಶವನ್ನೇ ಬೆಚ್ಚಿಬೀಳಿಸಿದೆ. ಇದನ್ನು ತೀವ್ರವಾಗಿ ಖಂಡಿಸಿದ್ದೇನೆ

ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ(ಡಿಸಿಸಿ) ಸಲಾಂ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಪ್ರವಾಸಿಗರು, ಅಲ್ಪಸಂಖ್ಯಾತ ಕಾಶ್ಮೀರಿ ಪಂಡಿತರು ಮತ್ತು ಕಣಿವೆಯ ವಲಸೆ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕ ದಾಳಿ ನಡೆದಿದೆ. ನನ್ನ ಗೆಳೆಯ ಶಾಲಾ ಸಹಪಾಠಿ ಮಂಜುನಾಥ್ ಈ ದಾಳಿಯಿಂದ ಮೃತಪಟ್ಟಿದ್ದಾರೆ. ಇವರ ಕುಟುಂಬಕ್ಕೆ ದುಃಖ ತಡೆಯುವ ಶಕ್ತಿ ದೇವರು ನೀಡಲಿ.

ಇಂತಹ ಕೃತ್ಯ ನಡೆಸುವ ಕ್ರೀಮಿಗಳನ್ನು ಮಟ್ಟ ಹಾಕಬೇಕಾಗಿದೆ, ಈಗಾಗಲೇ ಕರ್ನಾಟಕ ಸರ್ಕಾರದಿಂದ ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರನ್ನು ಘಟನೆ ನಡೆದ ಸ್ಥಳಕ್ಕೆ ಕಳುಹಿಸಿದೆ, ಕನ್ನಡಿಗರು ಸೇರಿದಂತೆ ಮೃತಪಟ್ಟ ಎಲ್ಲರಿಗೂ ಮತ್ತೊಮ್ಮೆ ಸಾಂತ್ವನ ತಿಳಿಸುತ್ತೇನೆ ಎಂದಿದ್ದಾರೆ.