ಶಿವಮೊಗ್ಗ, ಏಪ್ರಿಲ್ 24: : ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಏಪ್ರಿಲ್-2025ರ ಮಾಹೆಯ 28 ರಂದು ಬೆಳಿಗ್ಗೆ 11.00 ಗಂಟೆಯಿಂದ

ಮಧ್ಯಾಹ್ನ 12.30ರವರೆಗೆ ಸಾಗರ ತಾಲೂಕು ಪಂಚಾಯಿತಿ ಸಭಾಂಗಣ ದಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಯಲಿದೆ

ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ಧಾರಿತನ, ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ

ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.